ಮಡಿಕೇರಿ, ಅ. 29: ಕೊಡಗು ಜಿಲ್ಲೆಯಲ್ಲಿರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು, ಹೊಟೇಲ್, ರೆಸಾರ್ಟ್ಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸದಿದ್ದಲ್ಲಿ ಕನ್ನಡೇತರ ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನವೆಂಬರ್ 2ನೇ ವಾರದಿಂದ ಆರಂಭಿಸುವದಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ, ಅ. 29: ಕೊಡಗು ಜಿಲ್ಲೆಯಲ್ಲಿರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು, ಹೊಟೇಲ್, ರೆಸಾರ್ಟ್ಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸದಿದ್ದಲ್ಲಿ ಕನ್ನಡೇತರ ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನವೆಂಬರ್ 2ನೇ ವಾರದಿಂದ ಆರಂಭಿಸುವದಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಇರುವ ಕಾರಣ ಕನ್ನಡೇತರ ಫಲಕಗಳನ್ನು ತೆರವಗೊಳಿಸುವ ಕಾರ್ಯಾಚರಣೆÉಯನ್ನು ಎರಡನೇ ವಾರದಿಂದ ಆರಂಭಿಸುವದಾಗಿ ಲೋಕೇಶ್ ಸಾಗರ್ ತಿಳಿಸಿದರು. ಈಗಾಗಲೆ ಜಿಲ್ಲಾ ಯುವ ಒಕ್ಕೂಟ, ಕರ್ನಾಟಕ ಕಾವಲು ಪಡೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಲೇಖಕಿಯರ ಬಳಗ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಪರಿಷತ್ನ ಹೋರಾಟಕ್ಕೆ ಬೆಂಬಲ ಸೂಚಿಸಿವೆಯೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೋಶಾಧಿಕಾರಿ ಮುರಳೀಧರ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಉಪಸ್ಥಿತರಿದ್ದರು.