ಮಡಿಕೇರಿ. ಅ. 29: ತುಳು ಭಾಷೆ, ಸಂಸ್ಕøತಿ, ಆಚಾರ-ವಿಚಾರಗಳ ಬೆಳವಣಿಗೆಗೆ ಮತ್ತು ಅವುಗಳನ್ನು ಶಾಶ್ವತವಾಗಿ ಉಳಿಸಿ, ಬೆಳೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು 13 ತುಳು ಭಾಷಿಕ ಸಮುದಾಯಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ ಚಟುವಟಿಕೆಯನ್ನು ಚುರುಕುಗೊಳಿಸಿ ರುವದು ತುಳುವೆರ ಜನಪದ ಕೂಟದ ಹೆಗ್ಗಳಿಕೆಯಾಗಿದೆ ಎಂದು ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕೂಟದ ಮಡಿಕೇರಿ ನಗರ ಸಮಿತಿ ರಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲೆಯಾದÀ್ಯಂತ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ತುಳು ಭಾಷಿಕರಿದ್ದು, ತಾಲೂಕು, ಹೋಬಳಿ ಸಮಿತಿಗಳನ್ನು ಈಗಾಗಲೇ ರಚಿಸಲಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೂಟದ ಸ್ಥಾಪಕ ಕಾರ್ಯದರ್ಶಿ ಹರೀಶ್ ಆಳ್ವ, ಸಾಮಾಜಿಕವಾಗಿ ಹಾಗೂ ಆರ್ಥಿಕ ವಾಗಿ ಹಿಂದುಳಿದಿರುವ ಸಮಾಜದ ಬಂಧುಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸಂಘಟನೆ ಕಾರ್ಯ ನಿರ್ವಹಿಸ ಬೇಕಾಗಿದೆ ಎಂದರು.
ತುಳುನಾಡು ಸಹಕಾರ ಸಂಘದ ಸ್ಥಾಪಕ ಪ್ರವರ್ತಕ ಹಾಗೂ ಅಧ್ಯಕ್ಷ ರತ್ನಾಕರ ಶೆಟ್ಟಿ ಮಾತನಾಡಿ, ತುಳು ಭಾಷಿಕರು ಅಧಿಕ ಸಂಖ್ಯೆಯಲ್ಲಿರುವದ ರಿಂದ ತುಳುನಾಡು ಸಹಕಾರ ಸಂಘವನ್ನು ಸ್ಥಾಪಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಸದ್ಯದಲ್ಲಿಯೇ ಕಾರ್ಯಾರಂಭವಾಗಲಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಶೋಷಿತರ ಸಂಕಷ್ಟಗಳಿಗೆ ಸ್ಪಂದಿಸುವ ಕಾರ್ಯ ಕೂಟದಿಂದ ಆಗಬೇಕು ಎಂದರು. ಅಲ್ಲದೆ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು.
ಮಡಿಕೇರಿ ತಾಲೂಕು ಅಧ್ಯಕ್ಷ ಪ್ರಭುರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಎಂ.ಡಿ. ಸುರೇಶ್ ಕುಲಾಲ್, ಜಿಲ್ಲಾ ಸಲಹೆಗಾರ ಎಂ.ಡಿ. ನಾಣಯ್ಯ ಕುಲಾಲ್, ಗೌರವ ಸಲಹೆಗಾರÀ ಬಾಲಕೃಷ್ಣ ರೈ, ವೀರಾಜಪೇಟೆ ತಾಲೂಕು ಅಧ್ಯಕ್ಷ ದಾಮೋದರ ಆಚಾರ್ಯ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸತೀಶ್ ಕುಂದರ್, ಅನುಸೂಯ, ಪ್ರಸಾದ್, ಗಿರೀಶ್ ರೈ, ಉಮೇಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಪುರುಷೋತ್ತಮ ಪ್ರಾರ್ಥಿಸಿ, ಬಿ.ಎಸ್. ಜಯಪ್ಪ ನಿರೂಪಿಸಿದರು. ಇದೇ ಸಂದರ್ಭ ಮಡಿಕೇರಿ ನಗರ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.