ಮಡಿಕೇರಿ, ಅ. 30: ನಗರದ ಜನತೆಗೆ ಮೂಲಭೂತ ಸೌಲಭ್ಯ ನೀಡುವಲ್ಲಿ ಮಡಿಕೆÉೀರಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದೆ. ನಗರದ ತುಂಬಾ ಯುಜಿಡಿ ಕಾಮಗಾರಿಯ ಸಮಾಧಿ ತಲೆ ಎತ್ತಿದ್ದು, ಸುಮಾರು 49 ಕೋಟಿ ರೂ. ಪೆÀÇೀಲು ಮಾಡಲಾಗಿದೆಯೆಂದು ನಗರಸಭಾ ಸದಸ್ಯ ಹಾಗೂ ಜೆ.ಡಿ.ಎಸ್. ಪ್ರಮುಖ ಕೆ.ಎಂ. ಗಣೇಶ್ ಆರೋಪಿಸಿದರು. ಮುಂದಿನ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದು ಸ್ಥಾನವನ್ನು ಕೂಡ ಗೆಲ್ಲುವದಿಲ್ಲವೆಂದು ಭವಿಷ್ಯ ನುಡಿದ ಗಣೇಶ್, ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್‍ಗೆ ಬರುವವರಿಗೆ ಸಂಪೂರ್ಣ ಸ್ವಾಗತವಿದೆಯೆಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಾ, ನಗರಸಭೆಯ ಕಾರ್ಯವೈಖರಿ ಬಗ್ಗೆ ಕಿಡಿಕಾರಿದರು. ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ಲವೆಂದ ಅವರು, ನಗರಸಭೆ ಆಡಳಿತ ಅಸ್ತಿತ್ವದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ತತ್ವ ಸಿದ್ಧಾಂತಗಳನ್ನು ಒಪ್ಪಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ತಾವು ಹಾಗೂ ಇತರರು ಯಾವದೇ ಕಾರಣಕ್ಕೂ ಮುಳುಗುತ್ತಿರುವ ಹಡಗಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಮರಳುವದಿಲ್ಲವೆಂದು ಸ್ಪಷ್ಟಪಡಿಸಿದರು.

ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲೇ ಇಲ್ಲವೆಂದು ಟೀಕಿಸಿದ ಅವರು. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಇರುವ ಕಾರಣ ಪಕ್ಷ ಬಿಟ್ಟವರನ್ನು ಮರಳಿ ಬರುವಂತೆ ಒತ್ತಾಯಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು. ಜೆಡಿಎಸ್ ನಾಯಕ ಮಾಜಿ ಸಚಿವ ಬಿ.ಎ. ಜೀವಿಜಯ ಕೂಡ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಊಹಾಪೆÀÇೀಹದ ಪ್ರಚಾರವನ್ನು ಮಾಡಲಾಗುತ್ತಿದೆ. ಜೀವಿಜಯ ಕಾಂಗ್ರೆಸ್ ಪಕ್ಷಕ್ಕೆ ಹೋಗುವದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದರು.

ಮುಂಬರುವ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗುವದು ಖಚಿತವಾಗಿದ್ದು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವಿಗಾಗಿ ಶ್ರಮಿಸುವದಾಗಿ ಗಣೇಶ್ ತಿಳಿಸಿದರು.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದರೆ 55 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡುವದಾಗಿ ಹೇಳಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಪರ ಒಲವು ಹೆಚ್ಚಾಗಿದ್ದು, ಜಿಲ್ಲೆಯಲ್ಲಿ ಕೂಡ ಜೆಡಿಎಸ್ ಸಬಲವಾಗುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‍ನಲ್ಲಿ ಮೂರನೇ ಸ್ಥಾನದ ಆತಂಕ ಎದುರಾಗಿದೆಯೆಂದು ಕೆ.ಎಂ. ಗಣೇಶ್ ಟೀಕಿಸಿದರು. ಗೋಷ್ಠಿಯಲ್ಲಿ ಲೀಲಾ ಶೇಷಮ್ಮ, ಡೆನ್ನಿ ಬರೋಸ್, ಸುಖೇಶ ಚಂಗಪ್ಪ, ಇಬ್ರಾಹಿಂ ಹಾಜರಿದ್ದರು.