ಮಡಿಕೇರಿ, ಅ. 31: ಜಿಲ್ಲಾಡಳಿತ ವತಿಯಿಂದ ತಾ. 1 ರಂದು (ಇಂದು) ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ. ನಂತರ ಸಂಜೆ 4.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.