ನಾಪೋಕ್ಲು, ಅ. 31: ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಉಚಿತ ಕಾನೂನು ಅರಿವು ಕಾರ್ಯಕ್ರಮ ಮತ್ತು ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ ತಾ. 2 ರಂದು ಬೆಳಿಗ್ಗೆ 10 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಪಿ. ದಿನೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಡಿಕೇರಿಯ ವಕೀಲೆ ಮೀನಾ ಕುಮಾರಿ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳೆಯರ ಕೌಟುಂಬಿಕ ಸಮಸ್ಯೆಗಳು, ಸಾರ್ವಜನಿಕರ ಕುಂದುಕೊರತೆಗಳು, ದೂರುಗಳಿದ್ದರೆ ವಕೀಲರೊಂದಿಗೆ ನೇರವಾಗಿ ಚರ್ಚಿಸಬಹುದು ಎಂದು ಪ್ರಕಟಣೆ ತಿಳಿಸಿದೆ.