ಮಡಿಕೇರಿ, ನ. 2: ಗಣರಾಜ್ಯೋತ್ಸವ ಆಚರಣೆ ಸಂದರ್ಭ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದ ಪಥ ಸಂಚಲನದಲ್ಲಿ ತಂಡದ ನಾಯಕಿಯಾಗಿ ಮುನ್ನಡೆಸಿದ ಜಿಲ್ಲೆಯ ಅಜ್ಜಿನಂಡ ಐಶ್ವರ್ಯ ದೇಚಮ್ಮ ಅವಳನ್ನು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ತಾ. 14 ರಂದು ನಡೆಯಲಿರುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ. ಅಲ್ಲದೆ ಈಕೆಯ ಅಸಾಧಾರಣ ಪ್ರತಿಭೆಯನ್ನು ಗುರುತಿಸಿ ಇಲಖೆ ವತಿಯಿಂದ ರಾಷ್ಟ್ರ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.