ವೀರಾಜಪೇಟೆ, ನ.1: ವಿಶ್ವವನ್ನೆ ಬೆರಗುಗೊಳಿಸುವ ವೀರ ಪರಂಪರೆ ಯನ್ನು ಬಿಂಬಿಸುವ ಸಂಸ್ಕøತಿಯನ್ನು ನಮ್ಮ ಕನ್ನಡ ನಾಡು ಹೊಂದಿದೆ ಎಂದು ವೀರಾಜಪೇಟೆ ತಹಶೀಲ್ದಾರ್ ಆರ್. ಗೋವಿಂದರಾಜು ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮೈದಾನದಲ್ಲಿ ನಡೆದ 62ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು ಕನ್ನಡಕ್ಕೆ ರಾಷ್ಟ್ರೀಯ ಸ್ಥಾನಮಾನ ಲಭ್ಯತೆ ಮಹತ್ವದ ಹಿರಿಮೆಯಾಗಿದೆ. ಈ ಹಿರಿಮೆಯನ್ನು ಹೆಚ್ಚಿಸಲು ಪ್ರತಿಯೊಬ್ಭರು ಪಾಲುದಾರರಾಗಬೇಕು ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ಉಪಾಧ್ಯಕ್ಷೆ ತಸ್ನಿಂ ಅಕ್ತರ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಮುಲ್ಲೆಂಗಡ ಮದೋಷ್ ಪೂವಯ್ಯ, ನಗರ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಮಾದಪಂಡ ಕಾಶಿ ಕಾವೇರಪ್ಪ, ಬಿ.ಇ.ಒ ಲೋಕೇಶ್ ವೃತ್ತ ನಿರೀಕ್ಷಕ ಕುಮಾರ್ ಆರಾಧ್ಯ ಉಪಸ್ಥಿತರಿದ್ದರು.
ಪೂರ್ವಾಹ್ನ 9 ಗಂಟೆಗೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಟ್ಟಣದ ಮುಖ್ಯ ಬೀದಿಯಲ್ಲಿ ಸ್ತಬ್ದಚಿತ್ರಗಳೊಂದಿಗೆ ಮೆರವಣಿಗೆ ನಡೆಯಿತು. ಸ್ತಬ್ದ ಚಿತ್ರದಲ್ಲಿ ಕೂರ್ಗ್ ವ್ಯಾಲಿ ಶಾಲೆ ವಿವಿಧ ಜಾನಪದ ಕಲೆಗಳನ್ನು ಬಿಂಬಿಸುವ ಯಕ್ಷಗಾನ, ಕೋಲಾಟ, ಬೊಳಕಾಟ್, ಉಮ್ಮತಾಟ್, ಡೊಳ್ಳುಕುಣಿತ, ವೀರಗಾಸೆಯನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದುಕೊಂಡಿತು. ಸಂತ ಅನ್ನಮ್ಮ ಶಾಲೆಯ ವೀರರಾಜೆಂದ್ರರನ್ನು ನೆನಪಿಸುವ ಸ್ತಬ್ದಚಿತ್ರಕ್ಕೆ ದ್ವಿತೀಯ ಸ್ಥಾನ, ಆರ್ಜಿಯ ಅಲ್ಪ ಸಂಖ್ಯಾತ ಮುರಾರ್ಜಿ ಶಾಲೆಯ ಆದಿಕವಿ ಪಂಪ ಹಾಗೂ ಇನ್ನಿತರ ಕವಿಗಳನ್ನು ಪರಿಚಯಿಸುವ ಸ್ತಬ್ದಚಿತ್ರ ತೃತೀಯ ಸ್ಥಾನ ಲಭಿಸಿತು.
ಪೊಲೀಸ್, ಎನ್ಸಿಸಿ, ಸ್ಕೌಟ್ಸ್, ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು, ಕಳೆದ ಬಾರಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕ ರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕ ಚಾಲ್ಸ್ ಡಿಸೋಜಾ ಹಾಗೂ ಎ.ವಿ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸ್ವಾಗತಿಸಿದರು. ಶಿಕ್ಷಕ ದೇವರ್ ವಂದಿಸಿದರು.