ಶ್ರೀಮಂಗಲ, ನ. 2: ಶ್ರೀಮಂಗಲ ವಿದ್ಯುತ್ ಉಪಕೇಂದ್ರದಿಂದ 15 ಕೆ.ಬಿ ಅಂತರದ ಬಿರುನಾಣಿಗೆ ರೂ. 80 ಲಕ್ಷ ವೆಚ್ಚದಲ್ಲಿ ನೂತನವಾಗಿ ರಸ್ತೆ ಬದಿಯ ಮೂಲಕ ನಿರ್ಮಿಸುವ 11 ಕೆವಿ ಎಕ್ಸ್‍ಪ್ರೆಸ್ ವಿದ್ಯುತ್ ಮಾರ್ಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತರಾಮ್ ಅವರು ಭೂಮಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು ಈ ಯೋಜನೆ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿ. ಈ ವಿದ್ಯುತ್ ಮಾರ್ಗದಿಂದ ಈ ಭಾಗದ ನಾಗರಿಕರಿಗೆ ಗುಣಮಟ್ಟದ ಹಾಗೂ ಅಡಚಣೆ ರಹಿತ ವಿದ್ಯುತ್ ಲಭಿಸುವಂತಾಗಲಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ.ಬೋಪಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಚೆಸ್ಕಾಂ ಅಭಿಯಂತರ ವಿಜಯ್ ಕುಮಾರ್, ಜಿಲ್ಲಾಧಿಕಾರಿ ವಿನ್ಸೆಂಟ್ ಡಿಸೋಜ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮನಿ ಪೊನ್ನಪ್ಪ, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ತಾ.ಪಂ ಸದಸ್ಯರುಗಳಾದ ಪಲ್ವೀನ್ ಪೂಣಚ್ಚ, ಆಶಾ ಜೇಮ್ಸ್, ಶ್ರೀಮಂಗಲ ವಲಯ ಕಾಂಗ್ರೆಸ್ ಅಧ್ಯಕ್ಷ ಕುಂಞಂಗಡ ಬೋಸ್ ಮಾದಪ್ಪ, ಬಿರುನಾಣಿ ವಲಯಾಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ, ಟಿ.ಶೆಟ್ಟಿಗೇರಿ ವಲಯ ಅಧ್ಯಕ್ಷ ಚೊಟ್ಟೆಯಂಡಮಾಡ ವಿಶು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.