*ಗೋಣಿಕೊಪ್ಪಲು, ನ. 2: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪೊನ್ನಂಪೇಟೆ ಶ್ರೀ ನಂದೀಶ್ವರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ನಡೆಸಿದ ಜಿಲ್ಲಾ ಮಟ್ಟದ ಆಟೋ ಚಾಲಕರ ನಡುವಿನ ಕಬಡ್ಡಿ ಪಂದ್ಯಾಟದಲ್ಲಿ ಕುಶಾಲನಗರದ ಚಾಮುಂಡೇಶ್ವರಿ ಆಟೋ ಚಾಲಕರ ಹಾಗೂ ಮಾಲೀಕರ ಸಂಘ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪೊನ್ನಂಪೇಟೆ ನಂದೀಶ್ವರ ಆಟೋ ಚಾಲಕ ಹಾಗೂ ಮಾಲೀಕರ ಸಂಘ ದ್ವಿತೀಯ ಸ್ಥಾನ ಪಡೆದುಕೊಂಡಿತು. ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕುಶಲಪುರ ಮೈದಾನದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾಟ ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತಾ ಗಣೇಶ್ ಚಾಲನೆ ನೀಡಿದರು.

ಪೊನ್ನಂಪೇಟೆ ಠಾಣಾಧಿಕಾರಿ ಮಹೇಶ್ ಮಾತನಾಡಿದರು. ಜಿಲ್ಲೆಯ ವಿವಿಧೆಡೆಯಿಂದ ಸುಮಾರು 15 ತಂಡಗಳು ಭಾಗವಹಿಸಿದ್ದವು.