ಸುಂಟಿಕೊಪ್ಪ, ನ. 2: ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮಮ ತಾ. 4 ರಂದು ಬೆಳಿಗ್ಗೆ 10.30 ಗಂಟೆಗೆ ಮಾದಾಪುರದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಮಂಡೇಪಂಡ ಮನು ಮೇದಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಕುಂಬೂರಿನ ಸುಂದರ, ಮಾದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ದಾದು ಬೋಪಯ್ಯ ಭಾಗವಹಿಸಲಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಇಬ್ರಾಹಿಂ ಸೀದಿ ತಿಳಿಸಿದ್ದಾರೆ.