ಮಡಿಕೇರಿ, ನ. 1: ಪ್ರಸಕ್ತ (2017-18ನೇ ಸಾಲಿನಲ್ಲಿ ನಿಗಮದಿಂದ ಪರಿಶಿಷ್ಟ ಜಾತಿ ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಚೇರಿಯಿಂದ ಅರ್ಜಿ ಉಚಿತವಾಗಿ ಪಡೆದು ಛಾಯಾಚಿತ್ರ, ಜಾತಿಪತ್ರ, ಪಡಿತರ ಚೀಟಿ, ಆಧಾರ್‍ಕಾರ್ಡ್, ಆದಾಯ ಪತ್ರ, ವಿದ್ಯಾರ್ಹತೆಗೆ ಸಂಬಂಧಪಟ್ಟ ದೃಢೀಕರಣ ಪತ್ರ ಹಾಗೂ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಇವುಗಳೊಂದಿಗೆ ತಾ. 18 ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಡಿಕೇರಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ಸಂ: 08272-228857 ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕುಮಾರ್ ತಿಳಿಸಿದ್ದಾರೆ.

ವಿಶೇಷ ದತ್ತು ಸಂಸ್ಥೆ ಸ್ಥಾಪನೆಗೆ

ಕೊಡಗು ಜಿಲ್ಲೆಯಲ್ಲಿ ದೊರೆಯುವ ಪರಿತ್ಯಕ್ತ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳ ರಕ್ಷಣೆ, ಪೋಷಣೆ ಹಾಗೂ ಆ ಮಕ್ಕಳನ್ನು ಕಾನೂನಿನ್ವಯ ದತ್ತು ಪ್ರಕ್ರಿಯೆಗೆ ಒಳಪಡಿಸುವ ಸಲುವಾಗಿ ವಿಶೇಷ ದತ್ತು ಸಂಸ್ಥೆಯನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಅವಕಾಶವಿದ್ದು, ಈ ಸಂಬಂಧ ಕೊಡಗು ಜಿಲ್ಲೆಯಲ್ಲಿ ವಿಶೇಷ ದತ್ತು ಸಂಸ್ಥೆಗಳನ್ನು ಸ್ಥಾಪಿಸಲು ಅರ್ಹ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು, ಮಕ್ಕಳ ಪಾಲನಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಸಂಸ್ಥೆಯು ಸೊಸೈಟಿ ಆಫ್ ರಿಜಿಸ್ಟ್ರೇಷನ್ ಕಾಯ್ದೆಯಡಿ ನೋಂದಣಿಯಾಗಿರುವ ಪ್ರತಿ, ಸಂಸ್ಥೆಯ ಬೈಲಾ, ಮನವಿ, ಅಸೋಷಿಯೇಷನ್ ಮಾಹಿತಿ, ಸಂಸ್ಥೆಯ ಆಡಳಿತ ಸಮಿತಿಯ ಪದಾಧಿಕಾರಿಗಳ ಪಟ್ಟಿ, ಕಳೆದ ಮೂರು ವರ್ಷಗಳ ಆಡಿಟ್ ವರದಿ, ಮಕ್ಕಳ ಪಾಲನೆ ಹಾಗೂ ರಕ್ಷಣೆಗೆ ಕುರಿತಂತೆ ಸಂಸ್ಥೆ ಕೈಗೊಂಡಿರುವ ಚಟುವಟಿಕೆಗಳ ಬಗ್ಗೆ ಸಂಸ್ಥೆಯ ಮುಖ್ಯಸ್ಥರಿಂದ ವರದಿ, ಸಂಸ್ಥೆಯ ಮಕ್ಕಳ ವಯಸ್ಸುವಾರು ವಿವರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬ್ರಾಹ್ಮಣರ ಕಲ್ಯಾಣ ಮಂಟಪದ ಮುಂಭಾಗ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ, ದೂ. ಸಂಖ್ಯೆ: 08272-228800 ನ್ನು ಸಂಪರ್ಕಿಸಬಹುದು.

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಐಸಿಡಿಎಸ್ ಯೋಜನೆಯಡಿ ಒಬ್ಬರು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಪಾಸಾದ ಅಭ್ಯರ್ಥಿಗಳಿಗೆ ಹಾಗೂ ಕಚೇರಿಗಳಲ್ಲಿ ಕೆಲಸ ಮಾಡಿ ಅನುಭವ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವದು. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ತಾ. 15 ರೊಳಗೆ ತಮ್ಮ ವೈಯಕ್ತಿಕ ಮಾಹಿತಿಯನ್ನೊಳಗೊಂಡ ಅರ್ಜಿ ಹಾಗೂ ವಿದ್ಯಾರ್ಹತೆ ಮತ್ತು ಅನುಭವದ ದೃಢೀಕೃತ ಪ್ರತಿಗಳೊಂದಿಗೆ ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುದರ್ಶನ ಅತಿಥಿ ಗೃಹದ ಹಿಂಭಾಗ, ಚೈನ್‍ಗೇಟ್ ಹತ್ತಿರ, ಮಡಿಕೇರಿ (ದೂರವಾಣಿ 08272 225379) ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ.