ಕೂಡಿಗೆ, ನ. 2: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಸ್ಥಾನೀಯ ಸಮಿತಿಯ ಅಧ್ಯಕ್ಷರಾಗಿ ಜಗನ್ನಾಥ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಮಲ್ಲೇನಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಭೋಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿಯಾಗಿ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ರವಿ, ಉಪಾಧ್ಯಕ್ಷರಾಗಿ ಧನರಾಜ್ ಇವರುಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ, ತಾ.ಪಂ. ಸದಸ್ಯ ಗಣೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಕೆ.ಟಿ. ಈರಯ್ಯ, ಕೂಡಿಗೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಬೊಮ್ಮಯ್ಯನ ಚಿಣ್ಣಪ್ಪ, ತಾಲೂಕು ಯುವ ಮೋರ್ಚಾದ ಉಪಾಧ್ಯಕ್ಷ ಚಂದ್ರು ಮೂಡ್ಲಿಗೌಡ, ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಕ್ತಿ ಕೇಂದ್ರದ ಕಾರ್ಯದರ್ಶಿ ಮಣಿಕುಮಾರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.