ಸೋಮವಾರಪೇಟೆ, ನ.6: ಯುವ ಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ನೆಹರು ಯುವ ಕೇಂದ್ರ ಹಾಗೂ ತಾಲೂಕು ಯುವ ಒಕ್ಕೂಟ ಮತ್ತು ಚಂದ್ರೋದಯ ಯುವಕ ಸಂಘ ಹಾನಗಲ್ಲು ಶೆಟ್ಟಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಬಿ.ಟಿ.ಸಿ.ಜಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನೆರೆ ಹೊರೆ ಯುವ ಸೋಮವಾರಪೇಟೆ, ನ.6: ಯುವ ಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ನೆಹರು ಯುವ ಕೇಂದ್ರ ಹಾಗೂ ತಾಲೂಕು ಯುವ ಒಕ್ಕೂಟ ಮತ್ತು ಚಂದ್ರೋದಯ ಯುವಕ ಸಂಘ ಹಾನಗಲ್ಲು ಶೆಟ್ಟಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಬಿ.ಟಿ.ಸಿ.ಜಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನೆರೆ ಹೊರೆ ಯುವ 12ನೇ ಶತಮಾನದಲ್ಲಿ ಬಸವಣ್ಣ ಜಾತ್ಯಾತೀತ ಸಮಾಜ ನಿರ್ಮಾಣ ಮಾಡಲು ಶ್ರಮಿಸಿದರೆ ಇಂದಿನ ಸರ್ಕಾರಗಳು ಜಾತಿ ಆಧಾರಿತ ಸಮಾಜ ನಿರ್ಮಾಣಕ್ಕೆ ಹೊರಟಿರುವದು ವಿಪರ್ಯಾಸವೆಂದರು.

ನಿವೃತ್ತ ಆರೋಗ್ಯಾಧಿಕಾರಿ ನಾಗರಾಜು ಸ್ವಚ್ಛತೆ ಮತ್ತು ಗ್ರಾಮ ನೈರ್ಮಲೀಕರಣ ವಿಷಯದ ಬಗ್ಗೆ ಮಾತನಾಡಿದರು. ಬಿಟಿಸಿಜಿ ಕಾಲೇಜಿನ ಉಪನ್ಯಾಸಕಿ ಜ್ಯೋತಿ ಅರುಣ್- ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ, ನೆಹರು ಯುವ ಕೇಂದ್ರದ ಮಹೇಶ್- ಸಂಘಗಳ ನೀತಿ ಹಾಗೂ ನಿಯಮಾವಳಿಗಳ ಬಗ್ಗೆ ಉಪನ್ಯಾಸ ನೀಡಿದರು.

ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಶೋಭರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಇತಿಹಾಸ ಉಪನ್ಯಾಸಕ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಚಂದ್ರೋದಯ ಯುವಕ ಸಂಘದ ಅಧ್ಯಕ್ಷ ಸುರೇಶ್ ಉಪಸ್ಥಿತರಿದ್ದರು. ತಾಲೂಕು ಯುವ ಒಕ್ಕೂಟದ ಚಂದ್ರಿಕಾ ಸ್ವಾಗತಿಸಿ, ರವಿ ವಂದಿಸಿದರು.