ಕುಶಾಲನಗರ, ನ. 6: ಭ್ರಷ್ಟಾಚಾರ ನಿಗ್ರಹ ದಳದ ಆಶ್ರಯದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಕುಶಾಲನಗರ ದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಡಿಕೇರಿಯ ಭ್ರಷ್ಟಾಚಾರ ನಿಗ್ರಹ ದಳದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಭ್ರಷ್ಟಾಚಾರ ತಡೆಗಟ್ಟುವ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಪಟ್ಟಣದಲ್ಲಿ ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸಿದರು.
ಕನ್ನಡ ಭಾರತಿ ಕಾಲೇಜು ಪ್ರಾಂಶುಪಾಲ ಪುರುಷೋತ್ತಮ್ ಜಾಥಾಗೆ ಚಾಲನೆ ನೀಡಿದರು.
ಈ ಸಂದರ್ಭ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಇನ್ಸ್‍ಪೆಕ್ಟರ್ ಮಂಜುನಾಥ್, ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಜಗದೀಶ್, ಕಾಲೇಜು ಎನ್ನೆಸ್ಸೆಸ್ ಘಟಕದ ಅಧಿಕಾರಿ ರುದ್ರೇಶ್, ಉಪನ್ಯಾಸಕ ರಾದ ಅಶ್ವಿನಿ ಕುಮಾರ್, ಬಸವರಾಜು ಇದ್ದರು.