ಮಡಿಕೇರಿ, ನ. 6: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೊ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆ ನಡೆಸುತ್ತಿದ್ದು, ಈ ತರಬೇತಿ ಸಂಸ್ಥೆಗಳ ಮೂಲಕ ಸಹಕಾರ ಸಂಘ-ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು ಅವಧಿಯ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್” ತರಬೇತಿ ಜನವರಿ 1 ರಿಂದ ಪ್ರಾರಂಭವಾಗುತ್ತದೆ. ಈ ತರಬೇತಿಯನ್ನು ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ. 18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿದೆ. ಕನಿಷ್ಟ ವಿದ್ಯಾರ್ಹತೆ ಎಸ್. ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂರವಾಣೆ ಸಂಖ್ಯೆ; 08272-228437, 9845318364 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನ ಪ್ರಾಂಶುಪಾಲೆ ರೇಣುಕಾ ತಿಳಿಸಿದ್ದಾರೆ.