ಸುಂಟಿಕೊಪ್ಪ, ನ.6 : ಬೆಂಗಳೂರಿನ ವಿಶ್ವೇಶ್ವರಯ್ಯ ಇಂಡಸ್ಟ್ರೀಯಲ್ ಮತ್ತು ಟೆಕ್ನಾಲಜಿ ಮ್ಯೂಸಿಯಂ (ವಿ.ಐ.ಟಿ.ಎಂ.) ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ತಾ. 9 ರಂದು ಸುಂಟಿಕೊಪ್ಪ ಸಂತಮೇರಿ ಶಾಲೆಯಲ್ಲಿ ಬೆಳಿಗ್ಗೆ 9.30 ಗಂಟೆಗೆ ಪ್ರೌಢಶಾಲಾ ಮಕ್ಕಳಿಗೆ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.

“ರಾಷ್ಟ್ರ ನಿರ್ಮಾಣಕ್ಕೆ ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತ” ಎಂಬ ಮುಖ್ಯ ವಿಷಯದಡಿ ಆರೋಗ್ಯ ಮತ್ತು ಯೋಗಕ್ಷೇಮ, ಸಂಪನ್ಮೂಲ ನಿರ್ವಹಣೆ ಮತ್ತು ಆಹಾರ ಭದ್ರತೆ, ತ್ಯಾಜ್ಯ ನಿರ್ವಹಣೆ ಹಾಗೂ ನೀರಿನ ಆಗರ ಸಂರಕ್ಷಣೆ, ಸಾರಿಗೆ ಮತ್ತು ಸಂಪರ್ಕ, ಡಿಜಿಟಲ್ ಮತ್ತು ತಂತ್ರಜ್ಞಾನ ಪರಿಹಾರಗಳು ಹಾಗೂ ಗಣಿತಶಾಸ್ತ್ರದಿಂದ ವಿನ್ಯಾಸ ಗೊಳಿಸುವಿಕೆ ಎಂಬ ಆರು ಉಪ ವಿಷಯಗಳ ಕುರಿತು ಮಾದರಿಗಳನ್ನು ಸಿದ್ಧಪಡಿಸಿ ಶಿಕ್ಷಕರು ವಿದ್ಯಾರ್ಥಿ ಗಳೊಂದಿಗೆ ವಸ್ತು ಪ್ರದರ್ಶನದಲ್ಲಿ ಭಾಗವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ತಿಳಿಸಿದ್ದಾರೆ.

ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ಶಾಲಾ ತಂಡಗಳು ತಾವು ಸ್ಪರ್ಧಿಸುವ ಉಪ ವಿಷಯಗಳ ವಿವರಗಳೊಂದಿಗೆ ತಾ. 7 ರೊಳಗಾಗಿ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾ¯ Éಯಲ್ಲಿ ಹೆಸರು ನೋಂದಾಯಿಸಿ ಕೊಳ್ಳಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ 99451 85213 ಅಥವಾ 94485 88352 ಅವರನ್ನು ಸಂಪರ್ಕಿಸುವದು.