ಮಡಿಕೇರಿ, ನ. 6: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ರ್ಯಾಲಿಯನ್ನು ಕೊಡಗು ಜಿಲ್ಲೆಯಲ್ಲಿ ನಡೆಸಲು ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು, ತಾ. 8 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವ ಕಾರ್ಯಕ್ರಮವಿದ್ದು ದ್ದನ್ನು ಜಿಲ್ಲಾಡಳಿತ ಟಿಪ್ಪು ಜಯಂತಿ ಹಿನ್ನೆಲೆ, ತಾ. 8ಕ್ಕೆ ಬದಲಾಗಿ ತಾ. 10ರ ನಂತರ ನಡೆಸುವಂತೆ ಸಲಹೆ ನೀಡಿದ್ದಾಗಿ ತಿಳಿಸಿರುವ ಜಿಲ್ಲಾ ಬಿಜೆಪಿ ಕಾರ್ಯಕ್ರಮಕ್ಕೆ ತಾ. 8 ರಂದು ಅನುಮತಿ ನಿರಾಕರಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

‘ಪರಿವರ್ತನಾ ರ್ಯಾಲಿ’ಗೆ ಕೊಡಗು ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು, ರಾಜ್ಯ ಸರ್ಕಾರದ ಒತ್ತಡದಿಂದ ಎಂದು ಜಿಲ್ಲಾ ಬಿಜೆಪಿ

(ಮೊದಲ ಪುಟದಿಂದ) ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಪರಿವರ್ತನಾ ರ್ಯಾಲಿ ನಡೆಯುತ್ತಿದ್ದು, ತಾ. 8 ರಂದು ಮಡಿಕೆÉೀರಿಯಲ್ಲಿ ಕಾರ್ಯಕ್ರಮ ನಡೆಯಬೇಕಾಗಿತ್ತು ಎಂದರಲ್ಲದೆ,

ಕಾಂಗ್ರೆಸ್ ಸರ್ಕಾರ ಯಾವದೇ ಷಡ್ಯಂತ್ರಗಳನ್ನು ಮಾಡಿದರು ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವದ ರೊಂದಿಗೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆಯೆಂದು ಭವಿಷ್ಯ ನುಡಿದರು. ಕಾಂಗ್ರೆಸ್ ಪಕ್ಷ ಅಧಃಪತನದತ್ತ ಸಾಗುತ್ತಿದ್ದು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಕೊನೆಯ ಮುಖ್ಯಮಂತ್ರಿಯಾಗಲಿದ್ದಾರೆಂದು ಭವಿಷ್ಯ ನುಡಿದರು.

ಟಿಪ್ಪು ಜಯಂತಿ ಕೈಬಿಡಲು ಆಗ್ರಹ

ಕೊಡಗು ಜಿಲ್ಲೆಯ ಜನರ ಭಾವನೆಗೆ ವಿರುದ್ಧವಾಗಿ ರಾಜ್ಯ ಸರ್ಕಾರ ಬಲವಂತವಾಗಿ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾಗಿದೆಯೆಂದು ಆರೋಪಿಸಿ ರುವ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕ್ರಮಗಳಿಗೆ ಸರ್ಕಾರ ತಡೆಯೊಡ್ಡುತ್ತಲೆ ಬಂದಿದ್ದು, ಟಿಪ್ಪುವಿನಿಂದ ಜಿಲ್ಲೆಗೆ ಸಾಕಷ್ಟು ಅನ್ಯಾಯವಾಗಿದ್ದರು ಜಯಂತಿ ಆಚರಣೆಗೆ ಉತ್ಸಾಹ ತೋರುತ್ತಿರು ವದು ಖಂಡನೀಯವೆಂದರು.

ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ನಡೆಸುವ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದ್ದು, ಇನ್ನಾದರು ಸರ್ಕಾರ ಎಚ್ಚೆತ್ತುಕೊಂಡು ಜಯಂತಿಯನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ, ಟಿಪ್ಪು ಜಯಂತಿಯ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದರು. ಟಿಪ್ಪು ಜಯಂತಿಗೆ ತಲಾ 50 ಸಾವಿರ ರೂ. ನೀಡುತ್ತಿರುವ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಘೋಷಣೆಯ ಅನುದಾನವನ್ನು ಇನ್ನೂ ಕೂಡ ಸಹಕಾರ ಸಂಘಗಳಿಗೆ ಬಿಡುಗಡೆ ಮಾಡಿಲ್ಲವೆಂದು ಆರೋಪಿಸಿದರು.

ಹಿಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಿ.ಟಿ.ಪ್ರದೀಪ್ ಅವರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ ಪಕ್ಷ ಬಿಡಲು ಮುಂದಾಗಿದ್ದರು. ಈ ರೀತಿಯ ದಿಟ್ಟ ನಿಲುವನ್ನು ಕಾಂಗ್ರೆಸ್ಸಿಗರು ತೆಗೆದುಕೊಳ್ಳಬೇಕೆಂದು ರವಿ ಕುಶಾಲಪ್ಪ ಹೇಳಿದರು.

ಜಿಲ್ಲಾ ವಕ್ತಾರ ನಾಪಂಡ ಕಾಳಪ್ಪ ಮಾತನಾಡಿ, ಕನ್ನಡ ರಾಜ್ಯೋತ್ಸವದ ದಿನ ಕಾಂಗ್ರೆಸ್ ಧ್ವಜಗಳು ಹಾಗೂ ಫ್ಲೆಕ್ಸ್‍ಗಳನ್ನು ಕಾನೂನು ಬಾಹಿರವಾಗಿ ಮಡಿಕೆÉೀರಿ ನಗರದಲ್ಲಿ ಅಳವಡಿ ಸಲಾಗಿತ್ತೆಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಯೊಬ್ಬರು ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದು, ಇವರ ವಿರುದ್ಧ ದೂರು ದಾಖಲಿಸಿ ಕೊಳ್ಳಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ಹಾಗೂ ನಗರಾಧ್ಯಕ್ಷ ಮಹೇಶ್ ಜೈನಿ ಉಪಸ್ಥಿತರಿದ್ದರು.