ಮಡಿಕೇರಿ, ನ. 7 : ರಾಜ್ಯ ಸರಕಾರ ನವೆಂಬರ್ 10ರಂದು ಆಚರಿಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಸಂದರ್ಭ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಕೊಡಗು ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯನ್ನು (ಸಿಆರ್‍ಪಿಎಫ್) ನಿಯೋಜಿಸಲಾಗಿದೆ. ಜಿಲ್ಲೆಗೆ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಿರಿಯ ಅಧಿಕಾರಿಗಲುಳು ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯನ್ನು ಕೂಡ ನಿಯೋಜಿಸಲಾಗಿದ್ದು, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಟಿಪ್ಪು ಜಯಂತಿಯನ್ನು ನೆಪ ಮಾಡಿಕೊಂಡು ಸಮಾಜದ ಶಾಂತಿ ಕದಡುವ ಸಾಧ್ಯತೆಗಳಿರುವದರಿಂದ (ಮೊದಲ ಪುಟದಿಂದ) ಕೇಂದ್ರ ಮೀಸಲು ಪೊಲೀಸ್ ಪಡೆಯನ್ನು ಕೂಡ ನಿಯೋಜಿಸಲಾಗಿದ್ದು, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಟಿಪ್ಪು ಜಯಂತಿಯನ್ನು ನೆಪ ಮಾಡಿಕೊಂಡು ಸಮಾಜದ ಶಾಂತಿ ಕದಡುವ ಸಾಧ್ಯತೆಗಳಿರುವದರಿಂದ ಹೆಚ್ಚಿನ ಜವಬ್ದಾರಿಯನ್ನು ಹೊಂದಿರುವ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಪೊಲೀಸ್ ಅಧಿಕಾರಿಗಳನ್ನು ಎಸ್ ಪಿ ಬರಮಾಡಿಕೊಂಡರು. ಕಳೆದ ವರ್ಷ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಅಷ್ಟೇನೂ ದೊಡ್ಡ ಪರಿಣಾಮವನ್ನು ಬೀರಿಲ್ಲವಾದರೂ, ಈ ಬಾರಿ ವಿಧಾನಸಭಾ ಚುನಾವಣೆ ಸಮೀಪದಲ್ಲೇ ಇರುವದರಿಂದ ರಾಜಕೀಯ ಲಾಭಕ್ಕಾಗಿ ಕಿಡಿಗೇಡಿಗಳು ಅಶಾಂತಿ ಮೂಡಿಸುವ ಸಾಧ್ಯತೆಗಳಿದೆ. ಇದೇ ಕಾರಣಕ್ಕೆ ರಾಜ್ಯ ಗೃಹ ಇಲಾಖೆ ಟಿಪ್ಪು ಜಯಂತಿ ವಿಚಾರದಲ್ಲಿ ಅತ್ಯಂತ ಸೂಕ್ಷ್ಮ ಎನಿಸಿಕೊಂಡಿರುವ ಕೊಡಗು ಜಿಲ್ಲೆಯ ಬಗ್ಗೆ ಹೆಚ್ಚು ಆಸಕ್ತಿ ತೋರಿ ಬಿಗಿ ಬಂದೋಬಸ್ತ್ ಕೈಗೊಂಡಿ ರುವದಾಗಿ ತಿಳಿದುಬಂದಿದೆ.