ಮಡಿಕೇರಿ, ನ. 9: ಕೂರ್ಗ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ತಾ. 18 ಮತ್ತು 19 ರಂದು ಜಿಲ್ಲಾ ಮಟ್ಟದ ಅಂತರ ಶಾಲಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಗರದ ಮಿಡ್ಲ್‍ಗ್ರೌಂಡ್‍ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಪಂದ್ಯಾವಳಿ ಕುರಿತು ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಸಿಬಿಎಸ್‍ಇ, ಐಸಿಎಸ್‍ಇ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪಂದ್ಯಾವಳಿ ನಡೆಯಲಿದೆಯೆಂದು ತಿಳಿಸಿದರು. ಮಡಿಕೇರಿ, ನ. 9: ಕೂರ್ಗ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ತಾ. 18 ಮತ್ತು 19 ರಂದು ಜಿಲ್ಲಾ ಮಟ್ಟದ ಅಂತರ ಶಾಲಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಗರದ ಮಿಡ್ಲ್‍ಗ್ರೌಂಡ್‍ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಪಂದ್ಯಾವಳಿ ಕುರಿತು ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಸಿಬಿಎಸ್‍ಇ, ಐಸಿಎಸ್‍ಇ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪಂದ್ಯಾವಳಿ ನಡೆಯಲಿದೆಯೆಂದು ತಿಳಿಸಿದರು. ತಂಡಗಳು ತಲಾ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದಲ್ಲಿ ರಿವರ್ಸ್ ಸಿಂಗಲ್ಸ್ ಪಂದ್ಯವನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು. ಅಸೋಸಿಯೇಷನ್ ಸದಸ್ಯೆ ರಶ್ಮಿ ದೇವಯ್ಯ ಮಾತನಾಡಿ, ವರ್ಷಂಪ್ರತಿ ಜಿಲ್ಲಾ ಮಟ್ಟದ ರ್ಯಾಂಕಿಂಗ್ ಪಂದ್ಯಾವಳಿ, ಅಂತರ್ ಶಾಲಾ ಪಂದ್ಯಾವಳಿ ಮತ್ತು ಮುಕ್ತ ಪಂದ್ಯಾವಳಿಯನ್ನು ಆಯೋಜಿಸಿ ಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಅಸೋಸಿಯೇಷನ್ ಸದಸ್ಯೆ ಕಾವ್ಯ ಉಪಸ್ಥಿತರಿದ್ದರು.