ಸೋಮವಾರಪೇಟೆ, ನ.9: ನೂತನ ಪಿಂಚಣಿ ಯೋಜನೆ ಅವೈಜ್ಞಾನಿಕವಾಗಿದ್ದು, ಈ ಹಿಂದೆ ಇದ್ದಂತಹ ಪಿಂಚಣಿಯನ್ನೇ ಜಾರಿಗೆ ತರಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಎನ್‍ಪಿಎಸ್ ನೌಕರರ ಸಂಘ, ಈ ಬಗ್ಗೆ ಸರ್ಕಾರವನ್ನು ಆಗ್ರಹಿಸಲು ತಾ. 12ರಂದು ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸಮಾವೇಶದಲ್ಲಿ ಜಿಲ್ಲೆಯಿಂದಲೂ ಸಾವಿರಾರು ಮಂದಿ ಭಾಗವಹಿಸುವದಾಗಿ ತಿಳಿಸಿದೆ.

ಇಲ್ಲಿನ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಎನ್‍ಪಿಎಸ್ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಸತೀಶ್ ಅವರು, ನೂತನ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ 2004 ಹಾಗೂ ರಾಜ್ಯ ಸರ್ಕಾರ 2006ರಲ್ಲಿ ಜಾರಿಗೆ ತಂದಿದ್ದು, ಇದರಿಂದ ಸರ್ಕಾರಿ ನೌಕರರ ನಿವೃತ್ತ ಸೋಮವಾರಪೇಟೆ, ನ.9: ನೂತನ ಪಿಂಚಣಿ ಯೋಜನೆ ಅವೈಜ್ಞಾನಿಕವಾಗಿದ್ದು, ಈ ಹಿಂದೆ ಇದ್ದಂತಹ ಪಿಂಚಣಿಯನ್ನೇ ಜಾರಿಗೆ ತರಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಎನ್‍ಪಿಎಸ್ ನೌಕರರ ಸಂಘ, ಈ ಬಗ್ಗೆ ಸರ್ಕಾರವನ್ನು ಆಗ್ರಹಿಸಲು ತಾ. 12ರಂದು ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸಮಾವೇಶದಲ್ಲಿ ಜಿಲ್ಲೆಯಿಂದಲೂ ಸಾವಿರಾರು ಮಂದಿ ಭಾಗವಹಿಸುವದಾಗಿ ತಿಳಿಸಿದೆ.

ಇಲ್ಲಿನ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಎನ್‍ಪಿಎಸ್ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಸತೀಶ್ ಅವರು, ನೂತನ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ 2004 ಹಾಗೂ ರಾಜ್ಯ ಸರ್ಕಾರ 2006ರಲ್ಲಿ ಜಾರಿಗೆ ತಂದಿದ್ದು, ಇದರಿಂದ ಸರ್ಕಾರಿ ನೌಕರರ ನಿವೃತ್ತ ಆಗ್ರಹಿಸಲಾಗುವದು ಎಂದರು.

ನಿಶ್ಚಿತ ಪಿಂಚಣಿ ನಮ್ಮ ಹಕ್ಕು ಎಂಬ ಧ್ಯೇಯವಾಕ್ಯದೊಂದಿಗೆ ನೌಕರರಲ್ಲಿ ಜಾಗೃತಿಮೂಡಿಸಿ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ತಾ. 12ರಂದು ಪೂರ್ವಾಹ್ನ 10 ಗಂಟೆಗೆ ಮೈಸೂರು ಕಲಾ ಮಂದಿರದಲ್ಲಿ ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಸಹಸ್ರಾರು ನೌಕರರು ಸೇರಿ ಸಮಾವೇಶ ನಡೆಸು ತ್ತಿದ್ದು, ಕೊಡಗು ಜಿಲ್ಲೆಯಿಂದಲೂ ಸಾವಿರಾರು ಮಂದಿ ನೌಕರರು ತೆರಳುವದಾಗಿ ಮಾಹಿತಿ ನೀಡಿದರು.

ಸರ್ಕಾರದ ನೂತನ ಪಿಂಚಣಿ ಯೋಜನೆಯಿಂದ ನೌಕರರು ನಿವೃತ್ತಿಯ ನಂತರ ಆರ್ಥಿಕ ಭದ್ರತೆ ಯಿಲ್ಲದೆ ಸಂಕಷ್ಟಕ್ಕೆ ಈಡಾಗುವದು ನಿಶ್ಚಿತ. ಈ ಹಿನ್ನೆಲೆ ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂಬ ಬೇಡಿಕೆ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುವ ಸಮಾವೇಶಕ್ಕೆ ಸೋಮವಾರಪೇಟೆಯಿಂದಲೂ ಹೆಚ್ಚಿನ ನೌಕರರು ಭಾಗವಹಿಸಬೇಕು ಎಂದು ತಾಲೂಕು ಅಧ್ಯಕ್ಷ ಶ್ರೀಕಾಂತ್ ಮನವಿ ಮಾಡಿದರು.

ಸಮಾವೇಶದ ಬಗೆಗಿನ ಹೆಚ್ಚಿನ ಮಾಹಿತಿಗೆ ಮೊ: 9035558010, 7411000100 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು. ಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಟಿ.ಆರ್. ಪ್ರಭು, ಡಿ.ಎಂ. ಚಿಣ್ಣಪ್ಪ, ಗೋಪಿನಾಥ್, ರವಿಕುಮಾರ್ ಭಾಗವಹಿಸಿದ್ದರು.