ಮಡಿಕೇರಿ, ನ. 11: ಪ್ರಸಕ್ತ 2017-18ನೇ ಸಾಲಿಗೆ ಪರಿಶಿಷ್ಟ ಜಾತಿ, ಪಂಗಡಗಳ ಅಭ್ಯರ್ಥಿಗಳನ್ನು ಜೆಇಇ, ಎನ್‍ಇಇಟಿ, ಜಿಎಟಿಇ, ಜಿಆರ್‍ಇ ಮುಂತಾದ ಅಭ್ಯರ್ಥಿಗಳಿಗೆ ಪೂರ್ವಭಾವಿ ತರಬೇತಿಗೆ ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು ಮತ್ತು ಕರ್ನಾಟಕ ರಾಜ್ಯದಲ್ಲಿ ವಾಸವಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಜೆಇಇ, ಎನ್‍ಇಇಟಿ, ಜಿಎಟಿಇ, ಜಿಆರ್‍ಇ ಕೋರ್ಸ್‍ಗಳಿಗೆ ಅರ್ಹತೆ ಇರುವ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು ಈ ಕೋರ್ಸುಗಳಿಗೆ ಮೆರಿಟ್ ಆಧಾರದ ಮೇಲೆ ಟಾಪರ್‍ಗಳಲ್ಲಿ ಶೇ. 50 ರಷ್ಟನ್ನು ನಿಲಯಾರ್ಥಿಗಳಿಗೆ ಮತ್ತು ಶೇ. 50 ರಷ್ಟನ್ನು ಇತರ ವಿದ್ಯಾರ್ಥಿಗಳಿಗೆ ಜಿಲ್ಲಾವಾರು ಗುರಿ ನಿಗದಿಪಡಿಸಲಾಗುವದು.

ತರಬೇತಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ತಹಶೀಲ್ದಾರ್‍ರವರಿಂದ ಪಡೆದ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವದು. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿರುತ್ತದೆ. ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.