ಗೋಣಿಕೊಪ್ಪಲು, ನ. 11: ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವದು ನಿಶ್ಚಿತ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಮಾಂಗೇರ ಪದ್ಮಿನಿ ಪೊನ್ನಪ್ಪ ಹೇಳಿದರು.
ನಗರ ಕಾಂಗ್ರೆಸ್ ವತಿಯಿಂದ ನಡೆದ ಮನೆಮನೆಗೆ ಕಾಂಗ್ರೆಸ್ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಜನತೆಗೆ ಜನಪರ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ನೀಡುವಲ್ಲಿ ಸಫಲವಾಗಿದ್ದು ಮುಂದಿನ ಚುನಾವಣೆಯಲ್ಲಿ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕಾಡ್ಯಮಾಡ ಚೇತನ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಗ್ರಾ.ಪಂ. ಸದಸ್ಯರುಗಳಾದ ಪ್ರಮೋದ್ ಗಣಪತಿ, ಬಿ.ಎನ್. ಪ್ರಕಾಶ್, ರಾಜಶೇಖರ್, ಯಾಸ್ಮಿನ್, ಶಾಹೀದ, ಧನಲಕ್ಷ್ಮಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಅಬ್ದುಲ್ ಸಮ್ಮದ್, ತಾ.ಪಂ. ಸದಸ್ಯೆ ಆಶಾ ಜೇಮ್ಸ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.