ಮಡಿಕೇರಿ, ನ. 11: ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆ ತಾ. 14 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ವೀರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಸಲಾಗುವದು. ವೀರಾಜಪೇಟೆ ತಾಲೂಕು ವ್ಯಾಪ್ತಿಯ ಸಾರ್ವಜನಿಕರು-ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.