ಮಡಿಕೇರಿ, ನ. 11: ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಯಡಿ ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಜೀವ ರಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲು ದಯಾಳು ಮತ್ತು ಉಪಕಾರಿ-ನಾಮಕರಣ ವ್ಯಕ್ತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನವಾಗಿದೆ. ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಫಾರಂನ್ನು ಎಲ್ಲಾ ಜಿಲ್ಲಾ, ತಾಲೂಕು, ಸರ್ಕಾರಿ ಆರೋಗ್ಯ ಕೇಂದ್ರಗಳ ಆರೋಗ್ಯ ಮಿತ್ರರನ್ನು ಅಥವಾ ಜಿಲ್ಲಾ ಸಮನ್ವಯಾಧಿಕಾರಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು(ದೂ.ಸಂ: 7259003403) ಅಥವಾ ಶಾಂತಮ್ಮ (ದೂ.ಸಂ: 9686110161) ವಿಷಯ ನಿರ್ವಾಹಕರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ಇವರಿಂದ ಪಡೆಯಬಹುದು.