ಕುಶಾಲನಗರ, ನ. 11: ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಮತ್ತು ಆರ್ಯವೈಶ್ಯ ಮಹಿಳಾ ಮಂಡಳಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಅಭಿನವ ಸಂಗಮ ನಾಟಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಸ್ಥಳೀಯ ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಶಾರದ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶಾರದಾ ಶ್ರೀಪತಿ ಉದ್ಘಾಟಿಸಿದರು.
ಮಹಿಳಾ ಮಂಡಳಿ ಅಧ್ಯಕ್ಷೆ ಆಶಾ ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ 7 ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ತಂಡದಿಂದ ನಾಟಕ ಪ್ರದರ್ಶನ ನಡೆಯಿತು.
ಈ ಸಂದರ್ಭ ಆರ್ಯವೈಶ್ಯ ಮಂಡಳಿ ಉಪಾಧ್ಯಕ್ಷÀ ಬಿ.ಎಲ್. ಉದಯಕುಮಾರ್, ವಾಸವಿ ಯುವತಿಯರ ಸಂಘದ ಅಧ್ಯಕ್ಷ ಕುಸುಮ ಸುಖೇಶ್, ಯುವಜನ ಸಂಘದ ಅಧ್ಯಕ್ಷ ವಿ.ಆರ್. ಮಂಜುನಾಥ್, ಮಹಿಳಾ ಮಂಡಳಿ ಕಾರ್ಯದರ್ಶಿ, ಸುಮಾ ಶ್ಯಾಂ ಮತ್ತಿತರರು ಇದ್ದರು ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ತಾ. 12 ರಂದು (ಇಂದು) ನಡೆಯಲಿದೆ.