ಮಡಿಕೇರಿ, ನ. 14: ಬೆಂಗಳೂರಿನ ವಿಶ್ವೇಶ್ವರಯ್ಯ ಇಂಡಸ್ಟ್ರೀಯಲ್ ಮತ್ತು ಟೆಕ್ನಾಲಜಿ ಮ್ಯೂಸಿಯಂ (ವಿ.ಐ.ಟಿ.ಎಂ.), ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ವತಿಯಿಂದ ತಾ. 16 ರಂದು ಬೆಳಿಗ್ಗೆ 10 ಗಂಟೆಗೆ ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಹಾಗೂ ಗಣಿತ ಶಿಕ್ಷಕರಿಗೆ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.

“ರಾಷ್ಟ್ರ ನಿರ್ಮಾಣಕ್ಕೆ ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತ” ಎಂಬ ಮುಖ್ಯ ವಿಷಯದಡಿ ಆರೋಗ್ಯ ಮತ್ತು ಯೋಗ ಕ್ಷೇಮ, ಸಂಪನ್ಮೂಲ ನಿರ್ವಹಣೆ ಮತ್ತು ಆಹಾರ ಭದ್ರತೆ, ತ್ಯಾಜ್ಯ ನಿರ್ವಹಣೆ ಹಾಗೂ ನೀರಿನ ಆಗರ ಸಂರಕ್ಷಣೆ, ಸಾರಿಗೆ ಮತ್ತು ಸಂಪರ್ಕ, ಡಿಜಿಟಲ್ ಮತ್ತು ತಂತ್ರಜ್ಞಾನ ಪರಿಹಾರಗಳು ಹಾಗೂ ಗಣಿತ ಶಾಸ್ತ್ರದಿಂದ ವಿನ್ಯಾಸಗೊಳಿಸುವಿಕೆ ಎಂಬ ಆರು ಉಪ ವಿಷಯಗಳ ಕುರಿತು ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ವಿಜ್ಞಾನ ಮಾದರಿಗಳನ್ನು ಸಿದ್ಧಪಡಿಸಿ ವಸ್ತು ಪ್ರದರ್ಶನದಲ್ಲಿ ಭಾಗವಹಿಸಬೇಕು ಎಂದು ಡಯಟ್ ಸಂಸ್ಥೆಯ ಉಪ ನಿರ್ದೇಶಕರು (ಅಭಿವೃದ್ಧಿ) ಹಾಗೂ ಪ್ರಾಂಶುಪಾಲ ವಾಲ್ಟರ್ ಹಿಲರಿ ಡಿಮೆಲ್ಲೊ ತಿಳಿಸಿದ್ದಾರೆ.