ಮಡಿಕೇರಿ, ನ. 14: ಕೊಡಗು ಜಿಲ್ಲೆಯಲ್ಲಿ ವಾಸಿಸುವ ನಾಗರಿಕರಿಗಾಗಿ ಬಂದೂಕು ತರಬೇತಿಯನ್ನು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಡೆಸಲು ಉದ್ದೇಶಿಸಿದ್ದು, ಈ ತರಬೇತಿ ಪಡೆದುಕೊಳ್ಳಲು ಆಸಕ್ತಿ ಉಳ್ಳವರು ಆರ್.ಪಿ.ಐ ಡಿ.ಎ.ಆರ್. ಕಚೇರಿಯಿಂದ ನಿಗದಿತ ಅರ್ಜಿಯನ್ನು ಪಡೆದು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ತಾ. 20 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ರೂ. 10 ಆಗಿರುತ್ತದೆ. ತರಬೇತಿಯ ಅವಧಿ ತಾ. 22 ರಿಂದ 28 ರವರೆಗೆ ಇರುತ್ತದೆ. ಅರ್ಜಿಯನ್ನು ಸಲ್ಲಿಸಲು ಇಚ್ಛೆಯುಳ್ಳವರು ತಮ್ಮ ಇತ್ತೀಚಿನ 4 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9480804906 ಮತ್ತು 08272228420 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪೊಲೀಸ್ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.