ಗೋಣಿಕೂಪ್ಪಲು, ನ. 14: ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಗೋಣಿಕೊಪ್ಪದ ಶರಪ್ಯೂದೀನ್ ಅವರನ್ನು ಆಯ್ಕೆ ಮಾಡಲಾಗಿದೆ.

ಮಡಿಕೇರಿ ಡಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಅರಣ್ಯ ನಿಗಮ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ನಡೆಯಿತು.

ರೇಷ್ಮೆ ನಿಗಮದ ಅಧ್ಯಕ್ಷ ಟಿ ಪಿ ರಮೇಶ್, ಜಿಲ್ಲಾ ಯುವ ಕಾಂಗ್ರೆಸ್ ಹನೀಫ್, ಕಾರ್ಯದರ್ಶಿ ಮುರುಗ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಡಿಕೇರಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿತುನ್ ಹನಗಲ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.