ಸೋಮವಾರಪೇಟೆ, ನ. 15: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಕ್ಕಲಿಗ ಗೌಡ ಸಂಘದ ಪ್ರಥಮ ವಾರ್ಷಿಕೋತ್ಸವ ತಾ. 19 ರಂದು ಯಡವಾರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಡಿ.ಎಸ್. ಚಂಗಪ್ಪ ತಿಳಿಸಿದ್ದಾರೆ.

ಸಂಘದ ಸದಸ್ಯರಿಗೆ ಅಂದು ಬೆಳಿಗ್ಗೆ 9 ಗಂಟೆಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ತಾಲೂಕು ಒಕ್ಕಲಿಗ ಸಂಘದ ನಿರ್ದೇಶಕ ಎಂ.ಎಲ್. ರಾಜು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಸಭೆಯನ್ನು ಮಾಜಿ ಸಚಿವ ಬಿ.ಎ. ಜೀವಿಜಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಪಿ. ಚಂದ್ರಕಲಾ, ಪೂರ್ಣಿಮಾ ಗೋಪಾಲ್, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ. ಭರತ್‍ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭ ಏಳನೇ ತರಗತಿ, ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಪದವಿ ಶಿಕ್ಷಣದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಗುವದು ಎಂದು ಚಂಗಪ್ಪ ತಿಳಿಸಿದ್ದಾರೆ.