ಸೋಮವಾರಪೇಟೆ, ನ. 15: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವತಿಯಿಂದ 62ನೇ ಕನ್ನಡರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ತಾ. 27ರಂದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಶಾಲೆಯ ಪದವೀಧರ ಮುಖ್ಯೋಪಾಧ್ಯಾಯರಾದ ಅಣ್ಣಮ್ಮ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9.30ರಿಂದ ಚನ್ನಬಸಪ್ಪ ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿದೆ. 8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವರಚಿತ ಸಣ್ಣ ಕಥೆ ಓದುವದು(6ರಿಂದ 7 ನಿಮಿಷ), 6, 7, 8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವರಚಿತ ಕವನ ವಾಚನ(3 ನಿಮಿಷ), 7, 8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ನನ್ನ ನೆಚ್ಚಿನ ಕವಿ ಪರಿಚಯ (5 ನಿಮಿಷ) ಸ್ಪರ್ಧೆಗಳು ನಡೆಯಲಿವೆ.
ಸೋಮವಾರಪೇಟೆ, ಕಾಜೂರು, ಶಾಂತಳ್ಳಿ, ಗೌಡಳ್ಳಿ ಹಾಗೂ ಗೋಣಿಮರೂರು ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಪ್ರತಿ ಶಾಲೆಯಿಂದ ಪ್ರತಿ ವಿಭಾಗಕ್ಕೆ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.