ಕೂಡಿಗೆ, ನ. 16: ಇಂದಿನ ಯುವ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳುವ ದೃಷ್ಟಿಯಿಂದ ಮಂಗಳ ಯೋಜನೆಯಂತಹ ವಿನೂತನ ಕಾರ್ಯಕ್ರಮಗಳು ಸಹಕಾರಿ ಎಂದು ಸಾಹಿತಿ ಭಾರದ್ವಾಜ್ ಆನಂದ ತೀರ್ಥ ಹೇಳಿದರು. ಚಿಕ್ಕಅಳುವಾರದಲ್ಲಿನ ಸ್ನಾತಕೋತ್ತರ ಕೇಂದ್ರದ ವತಿಯಿಂದ ಕಣಿವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಮಂಗಳ ಯೋಜನೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ತೊಡಗಿಕೊಳ್ಳುವ ಮೂಲಕ ಶಿಸ್ತು, ಸಂಯಮ, ಸಹಬಾಳ್ವೆ, ಸಮಯಪ್ರಜ್ಞೆ, ನಾಯಕತ್ವ ಗುಣದಂತಹ ಮೌಲ್ಯಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಸಾರ್ಥಕ ಪಡೆಸಿಕೊಳ್ಳಿ ಎಂದು ತಿಳಿಸಿದರು.

ಮಂಗಳ ಯೋಜನೆಯ ಸಂಯೋಜಕ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ. ರಾಜ್‍ಕುಮಾರ್ ಎಸ್. ಮೇಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಂಗಳೂರು ವಿಶ್ವ ವಿದ್ಯಾನಿಲಯದ ಮಹತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ವಿದ್ಯಾರ್ಥಿ ಗಳ ಸಹಕಾರದೊಂದಿಗೆ ಗ್ರಾಮಸ್ತರ ಮನೆ ಮನೆಗೆ ತೆರಳಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಅವುಗಳ ಸದುಪಯೋಗಪಡಿಸಿಕೊಳ್ಳುವಂತೆ ಅರಿವು ಮೂಡಿಸುವದರ ಜೊತೆಗೆ ಮನೆಯ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಡುವದು, ಆರೋಗ್ಯವನ್ನು ಕಾಪಾಡಿಕೊಳ್ಳುವದರ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಎಂ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್, ಶಿವನಂಜಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಹೆಚ್.ಎಸ್. ರಾಜಶೇಖರ, ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕರು, ಶಾಲಾ ಮುಖ್ಯೋಪಾಧ್ಯಾಯ ಗಣೇಶ್, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಹಾಗೂ ವಿದ್ಯಾರ್ಥಿಗಳು ಇದ್ದರು.ಮಾತನಾಡಿ, ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಮಟ್ಟದಲ್ಲಿ ಹಲವು ಜಾಗೃತಿ, ಅರಿವು ಮೂಡಿಸುವ ಕಾರ್ಯ ಯೊಜನೆಗಳು ರೂಪಿಸ ಬೇಕಾದ ಅಗತ್ಯತೆ ಇದೆ ಎಂದರು.