ಸೋಮವಾರಪೇಟೆ,ನ.16: ಇಲ್ಲಿನ ಪುಷ್ಪಗಿರಿ ಜೇಸೀ ಸಂಸ್ಥೆಯ ವತಿಯಿಂದ ಸ್ಥಳೀಯ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿರುವ ಜೇಸೀ ಸಪ್ತಾಹಕ್ಕೆ ಸಂಸ್ಥೆಯ ವಲಯ ಉಪಾಧ್ಯಕ್ಷ ರಿಚರ್ಡ್ ಮತಾಯಿಸ್ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸೀ ಅಧ್ಯಕ್ಷ ಬಿ.ಎಸ್. ಮನೋಹರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಲಯ ಅಧಿಕಾರಿ ಕೆ.ಜೆ. ಗಿರೀಶ್ ಉಪಸ್ಥಿತರಿದ್ದರು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ಆರ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಂ.ಎ. ರುಬೀನಾ, ಜೇಸೀರೇಟ್ ಅಧ್ಯಕ್ಷೆ ಮೀನಾ ಮಂಜುನಾಥ್, ಯೋಜನಾ ನಿರ್ದೇಶಕಿ ಮಂಜುಳಾ ಸುಬ್ರಮಣಿ ಉಪಸ್ಥಿತರಿದ್ದರು.

ಜೇಸೀ ಸಪ್ತಾಹ ಅಂಗವಾಗಿ ಎಲ್‍ಕೆಜಿಯಿಂದ 4ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಂಸ್ಥೆಯ ಸುಮಾ ನಿರಂಜನ್, ಮಾಯಾ ಗಿರಿಧರ್, ಉಷಾರಾಣಿ ಕಾರ್ಯಕ್ರಮ ನಿರ್ವಹಿಸಿದರು.