ಮಡಿಕೇರಿ, ನ. 17: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್‍ನಲ್ಲಿ ನಡೆದ ಮಕ್ಕಳ ಹಬ್ಬದಲ್ಲಿ ಮಡಿಕೇರಿಯ ಲಿಟ್ಲ್ ಫ್ಲವರ್ ಶಾಲೆಯ ವಿದ್ಯಾರ್ಥಿಗಳು ಅರೆಭಾಷೆ ಜಾನಪದ ನೃತ್ಯ ಪ್ರದರ್ಶಿಸಿದರು. ವಿದ್ಯಾಸಂಸ್ಥೆಯ ಮುಖ್ಯಸ್ಥೆ ಪರ್ಲಕೋಟಿ ಸೋನಾ ಪ್ರೀತು ನೇತೃತ್ವದಲ್ಲಿ ವಿದ್ಯಾರ್ಥಿಗಳು ತೆರಳಿದ್ದರು.