ಕುಶಾಲನಗರ, ನ. 18: ಕುಶಾಲನಗರವನ್ನು ಕೇಂದ್ರ ವಾಗಿಸಿಕೊಂಡು ನೂತನ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಎರಡನೇ ಹಂತದ ಧರಣಿ ಕಾರ್ಯಕ್ರಮದಲ್ಲಿ ಶನಿವಾರ ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದರು.ಸಂಘದ ಅಧ್ಯಕ ವಿ.ಪಿ.ನಾಗೇಶ್ ನೇತೃತ್ವದಲ್ಲಿ ಸ್ಥಳೀಯ ಕಾರು ನಿಲ್ದಾಣದ ಗುಂಡೂರಾವ್ ವೇದಿಕೆಯಲ್ಲಿ ಧರಣಿ ನಡೆಸಿದ ಸಂಘದ ಪದಾಧಿಕಾರಿಗಳು, ಸದಸ್ಯರು ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು.
ಈ ಸಂದರ್ಭ ತಾಲೂಕು ಹೋರಾಟ ಕೇಂದ್ರ ಸಮಿತಿ ಪ್ರಮುಖ ಅಬ್ದುಲ್ ಖಾದರ್, ಆಟೋ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಜೋಸೆಫ್ ವಂದನಾಥ್, ಸಂಚಾಲಕ ಕೆ.ಜಿ. ಕೃಷ್ಣಮೂರ್ತಿ, ಸಹ ಕಾರ್ಯದರ್ಶಿ ಶಶಿಧರ್, ಖಜಾಂಚಿ ಜಗದೀಶ್, ನಿರ್ದೇಶಕರುಗಳಾದ ಅರುಣ, ಮಂಜುನಾಥ್, ಮಾಜಿ ಅಧ್ಯಕ್ಷ ಕೆ.ಟಿ. ಯೋಗೇಶ್, ಪದಾಧಿಕಾರಿಗಳು ಇದ್ದರು.