ಗೋಣಿಕೊಪ್ಪ ವರದಿ, ನ. 17: ಪೊನ್ನಂಪೇಟೆಯಲ್ಲಿ ತಾ. 18ರಂದು (ಇಂದು) ಮತ್ತು ತಾ. 19ರಂದು (ನಾಳೆ) ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಪ್ರಾಥಮಿಕ ಶಾಲಾ ಮೈದಾನ ಹಾಗೂ ಕೊಡವ ಸಮಾಜದಲ್ಲಿ ಕಾರ್ಯಕ್ರಮ ನಡೆಯಲಿದೆ.ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಿರುವ ವೇದಿಕೆ ಸಮೀಪ ರಾಷ್ಟ್ರ ಧ್ವಜಾರೋಹಣವನ್ನು ತಹಶೀಲ್ದಾರ್ ಆರ್. ಗೋವಿಂದ ರಾಜು, ಪರಿಷತ್ತು ಧ್ವಜಾರೋಹಣವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಲೋಕೇಶ್ ಸಾಗರ್, ನಾಡ ಧ್ವಜಾರೋಹಣವನ್ನು ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತ ನೆರವೇರಿಸಲಿದ್ದಾರೆ.
ಬಾಚಮಾಡ ಡಿ. ಗಣಪತಿ ಮುಖ್ಯದ್ವಾರವನ್ನು ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್, ಬಾಚಮಾಡ ಡಿ. ಸುಬ್ಬಯ್ಯ ದ್ವಾರವನ್ನು ತಾ.ಪಂ. ಸದಸ್ಯೆ ಮೂಕಳೇರ ಆಶಾ ಪೂಣಚ್ಚ, ಚೆಕ್ಕೇರ ಅಪ್ಪಯ್ಯ ದ್ವಾರವನ್ನು ಪೊಯಿಲೇಂಗಡ ಪಲ್ವಿನ್ ಪೂಣಚ್ಚ, ಕೀಕಣಮಾಡ ಸುಬ್ಬಯ್ಯ ದ್ವಾರವನ್ನು ತಾ.ಪಂ. ಸದಸ್ಯ ಬಿ.ಎಂ. ಗಣೇಶ್, ಚಿರಿಯಪಂಡ ಕುಶಾಲಪ್ಪ ದ್ವಾರವನ್ನು ಚಿರಿಯಪಂಡ ಉಮೇಶ್ ಉತ್ತಪ್ಪ, ಸ್ಕ್ವಾಲೀ. ಅಜ್ಜಮಾಡ ದೇವಯ್ಯ ದ್ವಾರವನ್ನು ತಾ.ಪಂ. ಸದಸ್ಯ ಕುಟ್ಟಂಡ ಅಜಿತ್ ಕರುಂಬಯ್ಯ ಉದ್ಘಾಟನೆ ಮಾಡಲಿದ್ದಾರೆ.
ಕಾಲೇಜು ಆವರಣದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಉದ್ಘಾಟಿಸುವರು.
ಪೊನ್ನಂಪೇಟೆ ಗ್ರಾ.ಪಂ. ಉಪಾಧ್ಯಕ್ಷೆ ಪಿ.ಎಸ್. ಮಂಜುಳ ರೆವರೆಂಡ್ ಫರ್ಡಿನ್ಯಾಂಡ್ ಕಿಟೆಲ್ ಪುಸ್ತಕ ಮಳಿಗೆಯನ್ನು ಉದ್ಘಾಟಿಸುವರು.
ಮಾಧ್ಯಮ ಕಚೇರಿಯನ್ನು ತಾ.ಪಂ. ಸದಸ್ಯ ಮೂಕಳೇರ ಪ್ರಶಾಂತ್ ಉತ್ತಪ್ಪ ಉದ್ಘಾಟಿಸಲಿದ್ದಾರೆ.
ಕೋಳೇರ ಸವಿನ್ ವಸ್ತು ಮತ್ತು ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಜಿ.ಪಂ. ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಉದ್ಘಾಟಿಸಲಿದ್ದಾರೆ.
ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯನ್ನು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ ಉದ್ಘಾಟಿಸಲಿದ್ದಾರೆ.
ಉದ್ಘಾಟನಾ ಸಮಾರಂಭ : ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮನು ಬಳಿಗಾರ್ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ.
ಶಾಸಕ ಕೆ. ಜಿ ಬೋಪಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಂ. ಆರ್ ಸೀತಾರಾಂ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಬಿ.ಎ ಹರೀಶ್ ಕೃತಿಗಳನ್ನು ಬಿಡುಗಡೆಗೊಳಿಸಲಿದ್ದಾರೆ.
ಅಪರಾಹ್ನ 1.30 ರಿಂದ ಗೀತಗಾಯನ, ಶೈಕ್ಷಣಿಕ ಗೋಷ್ಠಿ, ಕೊಡಗಿನ ಕೃಷಿ ಸಂಸ್ಕøತಿ ಪರಿಚಯ ಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳು ಮೊದಲ ದಿನ ನಡೆಯಲಿದೆ.