ವೀರಾಜಪೇಟೆ, ನ. 17: ಪ್ರತಿಯೊಬ್ಬರಿಗೂ ಕಾನೂನಿನ ಅಗತ್ಯವಿ ರುವದರಿಂದ ವಿದ್ಯಾರ್ಥಿಗಳು ಕಾನೂನು ತಿಳಿದುಕೊಂಡು ಜೀವನ ದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರಿ ಶಾಲೆ ಎಂದು ಅಂಜಿಕೆ ಪಡದೆ ಶ್ರದ್ಧೆಯಿಂದ ವಿದ್ಯೆ ಕಲಿತು ತಮ್ಮ ಜೀವನವನ್ನು ರೂಪಿಸಿಕೊಳ್ಳುವಂತಾ ಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಾನಂದ್ ಲಕ್ಷ್ಮಣ ಅಂಚಿ ಹೇಳಿದರು.
ಮಕ್ಕಳ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವೀರಾಜಪೇಟೆ ವಕೀಲರ ಸಂಘ ಹಾಗೂ ಚೆನ್ನಯ್ಯನ ಕೋಟೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಮಕ್ಕಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಕಾನೂನು ಹಾಗೂ ಬಾಲ ನ್ಯಾಯ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯಾರೇ ಆದರೂ ಕಳ್ಳತನ ಮಾಡಬಾರದು. ದುಷ್ಚಟಗಳನ್ನು ದೂರ ಮಾಡಬೇಕು. ಮಕ್ಕಳಿಗೆ ಯಾರದರೂ ಕಿರುಕುಳ ನೀಡಿದಲ್ಲಿ ಕೂಡಲೇ ಪೋಷಕರಿಗೆ ಅಥವಾ ಪೊಲೀಸರಿಗೆ ತಿಳಿಸು ವಂತಾಗಬೇಕು ಎಂದರು.
ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಎನ್.ಜಿ. ಕಾಮತ್ ಮಾತನಾಡಿ, ಮಕ್ಕಳು ಜವಹಾರ್ ಲಾಲ್ ಅವರನ್ನು ನೆನಪಿಸಿಕೊಳ್ಳು ವಂತಹ ಪುಣ್ಯ ದಿನವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಪ್ರಜೆಯಾಗಬೇಕೆಂದು ಆಶಿಸಿದರು. ಗ್ರಾಮಸ್ಥರು ಹಾಗೂ ದಾನಿಗಳಾದ ವಾಟೇರಿರ ಸುರೇಶ್ ಅವರು ವಿದ್ಯಾರ್ಥಿಗಳಿಗೆ ಶುಭಕೋರಿದರು. ವೇದಿಕೆಯಲ್ಲಿ ಮುಖ್ಯೋಪಾ ಧ್ಯಾಯರಾದ ರೋಜಿರಾಣೆ ಪಿಳ್ಳೆ, ರವಿಚಂದ್ರ ಸ್ವಾಮಿ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇತ್ತೀಚಿನ ದಿನಗಳಲ್ಲಿ ದೌರ್ಜನ್ಯಗಳು ಹೆಚ್ಚಾಗಿದ್ದು ಶೋಷಣೆಗೆ ಒಳಗಾಗದಂತೆ ಎಚ್ಚರ ವಹಿಸಬೇಕು. ಅಪರಿಚಿತ ವ್ಯಕ್ತಿಗಳು ತೊಂದರೆ ಮಾಡಿದಲ್ಲಿ ಕೂಡಲೇ ಪೋಷಕರಿಗೂ ಮತ್ತು ಪೊಲೀಸರಿಗೆ ತಿಳಿಸಬೇಕು ಎಂದರು. ವಕೀಲೆ ಅನುಪಮ ಬಿ. ಕಿಶೋರ್ ಉಪನ್ಯಾಸ ದಲ್ಲಿ ವಿದ್ಯಾರ್ಥಿಗಳು ಮೊಬೈಲ್ ದೂರವಿಟ್ಟು ಶಿಕ್ಷಣದ ಕಡೆಗೆ ಗಮನ ಹರಿಸುವ ಮೂಲಕ ತಮ್ಮ ಪ್ರತಿಭೆ ಗಳನ್ನು ತೋರಲು ಸಿಗುವಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರಲ್ಲದೆ ಮಕ್ಕಳ ಹಕ್ಕು ಹಾಗೂ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಟಿ.ಹೆಚ್. ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಶಿಕ್ಷಕ ರವಿಚಂದ್ರ ಸ್ವಾಮಿ ಸ್ವಾಗತಿಸಿ, ಶಿಕ್ಷಕಿ ಕೆ.ವಿ. ಶಿಲ್ಪ ನಿರೂಪಿ ಸಿದರೆ, ಬಿ.ಬಿ. ಜಾಜಿ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.