ವೀರಾಜಪೇಟೆ: ಇಲ್ಲಿನ ಕಾವೇರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ರೈನ್ಬೋ ಡೇಯನ್ನು ಖ್ಯಾತ ಕೀಬೋರ್ಡ್ ವಾದಕ ವಿ.ಟಿ. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಮಕ್ಕಳು ಬಣ್ಣ ಬಣ್ಣದ ಉಡುಪುಗಳನ್ನು ಧರಿಸಿ ಸಂಭ್ರಮಿಸಿದರು. ಶಾಲಾ ಪ್ರಾಂಶುಪಾಲ ಪಿ.ಎನ್. ವಿನೋದ್, ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಹಾಜರಿದ್ದರು.
ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ರಂಗಸಮುದ್ರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಪುಟಾಣಿಗಳಿಗೆ ಮತ್ತು ಗ್ರಾಮಸ್ಥರಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯೆ ಮಲ್ಲಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷೆ ಜೈನಾಭಿ ಮತ್ತು ಸ್ಥಳಿಯ ಶಾಲಾ ಶಿಕ್ಷಕ ವೃಂದ ಮತ್ತು ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಜಯಂತಿ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ಮಕ್ಕಳಿಂದ ಮನರಂಜನೆ ಕಾರ್ಯಕ್ರಮ ನಡೆಯಿತು.ಮಡಿಕೇರಿ: ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ವಿದ್ಯಾರ್ಥಿನಿ ಎಂ. ಪಲ್ಲವಿ ಗುರುನಮನ ಕವನ ವಾಚನ ಮಾಡಿದರು. ಅನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. ನಾಪೆÇೀಕ್ಲು: ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಅಂಬಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆನ್ನು ಆಚರಿಸಲಾಯಿತು. ಈ ಪ್ರಯುಕ್ತ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಮಹಿಳಾ ಸಮಿತಿ ಅಧ್ಯಕ್ಷೆ ಪಿ.ಎಂ. ಜಾನಕಿ ವಹಿಸಿದ್ದರು. ವೇದಿಕೆಯಲ್ಲಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಪಾರ್ವತಿ, ಸಮಿತಿ ಸದಸ್ಯೆ ಎನ್.ಕೆ. ಪೆÇನ್ನಮ್ಮ ಇದ್ದರು.
ಈ ಸಂದರ್ಭ ನಂಬಡಮಂಡ ಅಪ್ಪಯ್ಯ ಅವರ ಕುಟುಂಬದವರಿಂದ ಮಕ್ಕಳಿಗೆ ತಟ್ಟೆ ಹಾಗೂ ಬಾಚಮಂಡ ಕಾವೇರಪ್ಪ ಅವರ ಕುಟುಂಬದವರಿಂದ ಲೋಟ ಹಾಗೂ ಪಾತ್ರೆಗಳನ್ನು ಕೊಡುಗೆಯಾಗಿ ನೀಡಿದರು. ಅಂಗನವಾಡಿ ಶಿಕ್ಷಕಿ ಯಶೋಧ ಸ್ವಾಗತಿಸಿ, ವಂದಿಸಿದರು.