ಸಿದ್ದಾಪುರ, ನ. 19: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ವಲಯ ಕಾಂಗ್ರೆಸ್ ವತಿಯಿಂದ ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ರೇಷ್ಮೆ ಮಂಡಳಿ ನಿಗಮದ ಅಧ್ಯಕ್ಷ ಟಿ.ಪಿ. ರಮೇಶ್, ರಾಜ್ಯ ಸರಕಾರವು ಜನಪರ ಆಡಳಿತವನ್ನು ಮಾಡುತ್ತಿದ್ದು, ರೈತರ ಸಾಲ ಮನ್ನಾ, ಬಡವರಿಗೆ ಹಕ್ಕು ಪತ್ರ ವಿತರಣೆ, ಅನ್ನಭಾಗ್ಯ, ಬಡವರಿಗೆ ಉಚಿತ ಆರೋಗ್ಯ ಇನ್ನಿತರ ಸೌಲಭ್ಯಗಳನ್ನು ನೀಡುತಿದೆ ಎಂದರು.

ರಾಜ್ಯ ಅರಣ್ಯ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಮಾತನಾಡಿ, ಮೋದಿ ಸರಕಾರವು ಬಡವರ ಖಾತೆಗೆ ಹಣ ನೀಡುವದಾಗಿ ಜನ್‍ಧನ್ ಯೋಜನೆಯಡಿಯಲ್ಲಿ ಖಾತೆ ಪ್ರಾರಂಭ ಮಾಡುವಂತೆ ತಿಳಿಸಿ ಇದುವರೆಗೂ ನೀಡದೆ ವಂಚಿಸುತ್ತಿದೆ ಎಂದು ಆರೋಪಿಸಿದರು.

ಸಭೆಯಲ್ಲಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ, ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ತಾ.ಪಂ. ಸದಸ್ಯ ಅಪ್ರು ರವೀಂದ್ರ, ಗ್ರಾ.ಪಂ. ಅಧ್ಯಕ್ಷೆ ಪದ್ಮಾವತಿ, ಕಾಂಗ್ರೆಸ್ ಮುಖಂಡರುಗಳಾದ ವಿ.ಪಿ. ಸುರೇಶ್, ಉಸ್ಮಾನ್ ಹಾಜಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್, ಗ್ರಾ.ಪಂ. ಸದಸ್ಯರಾದ ಹಕೀಂ, ಸಾಬು ವರ್ಗೀಸ್, ಮುಸ್ತಫ, ವಲಯ ಕಾಂಗ್ರೆಸ್ ಅಧ್ಯಕ್ಷ ರಜಾಕ್ ಹಾಗೂ ಇತರರು ಹಾಜರಿದ್ದರು.