ಶ್ರೀಮಂಗಲ, ನ. 19: ಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜಿನಲ್ಲಿ ಬಿಡುಗಡೆಯಾದ ರೂ. 57 ಲಕ್ಷ ಅನುದಾನದಡಿ ವಿವಿಧ ರಸ್ತೆ ಕಾಮಗಾರಿಗಳಿಗೆ ಹುದಿಕೇರಿ ಗ್ರಾ.ಪಂ. ಅಧ್ಯಕ್ಷೆ ರೇಖಾ ಪೊನ್ನಪ್ಪ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ ಮಾತನಾಡಿ ಜಿಲ್ಲೆಗೆ ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜ್ ಅನುದಾನದಡಿ ಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ವಿವಿಧ ರಸ್ತೆಗಳಿಗೆ ಮೊದಲ ಹಂತದ ರೂ. 57 ಲಕ್ಷ ಅನುದಾನ ಬಿಡುಗಡೆಯಾಗಿದೆ. ಎರಡನೇ ಹಂತದ ಅನುದಾನ ಕೆಲವೇ ಸಮಯದಲ್ಲಿ ಬಿಡುಗಡೆಯಾಗಲಿದ್ದು, ಇದರಲ್ಲಿಯೂ ಸಹ ಗ್ರ್ರಾ.ಪಂ. ವ್ಯಾಪ್ತಿಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂ. 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಚೆಪ್ಪುಡಿರ ಅರುಣ್ ಮಾಚಯ್ಯ, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪೆಮ್ಮಂಡ ಪೊನ್ನಪ್ಪ, ಜಿ.ಪಂ. ಸದಸ್ಯ ಶಿವು ಮಾದಪ್ಪ, ತಾ.ಪಂ. ಸದಸ್ಯ ಪಲ್ವಿನ್ ಪೂಣಚ್ಚ, ಎ.ಪಿ.ಎಂ.ಸಿ. ಸದಸ್ಯ ನರೇನ್ ಕಾರ್ಯಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ವಾಸು ಕುಟ್ಟಪ್ಪ, ಗ್ರಾ.ಪಂ. ಉಪಾಧ್ಯಕ್ಷೆ ಸುನೀತ, ಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕಾರ್ಯದರ್ಶಿ ಆಲೀರ ಸಾದಲಿ, ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಮುಕ್ಕಾಟೀರ ಸಂದೀಪ್, ಯುವ ಘಟಕದ ಅಧ್ಯಕ್ಷ ಚಂಗುಲಂಡ ತಿಮ್ಮಯ್ಯ, ಕಳ್ಳಂಗಡ ಸಚಿನ್ ಸೇರಿದಂತೆ ಪ್ರಮುಖರು ಹಾಜರಿದ್ದರು.