ಮಡಿಕೇರಿ, ನ. 20: ರಾಷ್ಟ್ರಕ್ಕೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಮತ್ತು ಕಾಂಗ್ರೆಸ್ ನೀಡಿದ ಕೊಡುಗೆಯನ್ನು ಅರ್ಥೈಸಿಕೊಂಡು, ಕಾರ್ಯಕರ್ತರ ಪಡೆಯನ್ನು ಕಟ್ಟಿ ಕಾರ್ಯನಿರ್ವಹಿಸುವ ಮೂಲಕ ದೇಶ ಹಾಗೂ ಪಕ್ಷದ ಯಶಸ್ಸಿಗಾಗಿ ಚಿಂತನೆ ನಡೆಸಬೇಕೆಂದು ರಾಜ್ಯ ರೇಷ್ಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಟಿ.ಪಿ. ರಮೇಶ್ ಕರೆ ನೀಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿತ ‘ಮಾಜಿ ಪ್ರಧಾನಿ ಇಂದಿರಾಗಾಂಧಿಯವರ 100ನೇ ಜನ್ಮಶತಾಬ್ಧಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಈ ದೇಶಕ್ಕೆ ನೀಡಿರುವ ಮಹತ್ವದ ಕೊಡುಗೆಗಳನ್ನು ಅರಿಯದೆ ಮುಂದೆ ಸಾಗುತ್ತಿರುವದರಿಂದಲೇ ಪಕ್ಷ ಸೋಲನ್ನು ಕಾಣಬೇಕಾಯಿತೆಂದು ಅಭಿಪ್ರಾಯಪಟ್ಟರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನಿರ್ದೇಶನದಂತೆ ಪ್ರತಿ ಬ್ಲಾಕ್ ಮತ್ತು ವಲಯ ಮಟ್ಟದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಅವರು ಈ ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕಾಗಿದೆ. ಮನೆ ಮನೆಗೆ ಕಾಂಗ್ರೆಸ್‍ನ ಅಭಿವೃದ್ಧಿಯ ಚಿಂತನೆಗಳನ್ನು ಮುಟ್ಟಿಸುವ ಸಂದರ್ಭ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಇಂದಿರಾ ಗಾಂಧಿಯವರ ಸಂದೇಶಗಳನ್ನು ಮುಟ್ಟಿಸುವ ಕಾರ್ಯ ನಡೆಯಬೇಕೆಂದು ಹೇಳಿದರು.

ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷÀ ಚಿಲ್ಲವಂಡ ಕಾವೇರಪ್ಪ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾಗಾಂಧಿಯವರನ್ನು ಯುವಪೀಳಿಗೆಗೆ ಪರಿಚಯಿಸುವ ಕಾರ್ಯವನ್ನು ಪಕ್ಷದಲ್ಲಿ ರೂಪಿಸುವದು ಅತ್ಯವಶ್ಯವೆಂದರು. ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿ ಕಾರ್ಯನಿರ್ವಹಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ್ನು ಗೆಲ್ಲಿಸುವ ಮೂಲಕ ಸೋನಿಯಾಗಾಂಧಿ ಮತ್ತು ಸಿದ್ದರಾಮಯ್ಯನವರ ಕೈ ಬಲಪಡಿಸುವ ಕೆಲಸ ನಡೆಯಬೇಕೆಂದು ಹೇಳಿದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಮಾತನಾಡಿ, ಕೊಡಗಿನ ಎರಡೂ ವಿಧಾನ ಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಕಳೆದ ಚುನಾವಣೆÉಯಲ್ಲಿ ಕಳೆÉದುಕೊಳ್ಳುವ ಮೂಲಕ ನಾವು ಬೀದಿಯಲ್ಲಿ ನಡೆಯುತ್ತಿದ್ದೇವೆ ಎಂದು ಅಭಿಪ್ರಾಯಪಟ್ಟರು. ಇದೀಗ ನಾವೆಲ್ಲ ಒಂದಾಗಿ ಸಂಘÀಟಿತರಾಗಿ ಪಕ್ಷವನ್ನು ಬಲಪಡಿಸುವದು ಅನಿವಾರ್ಯವಾಗಿದೆ ಎಂದರು. ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಕಾರ್ಯವೈಖರಿಯನ್ನು ಇಡೀ ವಿಶ್ವವೇ ಅರಿತಿದ್ದು, ಇಂತಹ ಧೀಮಂತ ಮಹಿಳೆ ಸಿದ್ದಾಪುರಕ್ಕೆ 1975ರ ಸುಮಾರಿಗೆ ಬಂದಿದ್ದರು ಎಂದು ಸ್ಮರಿಸಿಕೊಂಡರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜಿ.ಆರ್. ಪುಷ್ಪಲತಾ ಮಾತನಾಡಿ, ಭಾರತದ ಪ್ರಥಮ ಮಹಿಳಾ ಪ್ರಧಾನಿಯಾದ ಇಂದಿರಾಗಾಂಧಿಯವರು ಸತತ ನಾಲ್ಕು ಬಾರಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಿ, ದಿಟ್ಟ ನಿರ್ಧಾರಗಳ ಮೂಲಕ ಜನಪರವಾಗಿ ಕಾರ್ಯನಿರ್ವಹಿಸಿದ್ದರು. ಇವರು ಮಹಿಳೆಯರಿಗೆ ದಾರಿದೀಪವಾಗಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್‍ನ ಹಿರಿಯ ಸದಸ್ಯ ಎಂ.ಇ. ಹನೀಫ್ ಮಾತನಾಡಿ, ಇಂದಿರಾಗಾಂಧಿಯವರು ತಮ್ಮ ಅಧಿಕಾರದ ಅವಧಿಯಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ, ಗರೀಭಿ ಹಠಾವೋ, ಇಪ್ಪತ್ತು ಅಂಶಗಳ ಕಾರ್ಯಕ್ರಮಗಳನ್ನು ನೀಡುವ ಮೂಲಕ ಬಡಜನರ ನೆರವಿಗೆ ಬಂದವರು. ಈ ಹಿನ್ನೆಲೆಯಲ್ಲಿ ಇಂದಿರಾಗಾಂಧಿಯವರನ್ನು ಪರಿಚಯಿಸುವ ದೊಡ್ಡ ಮಟ್ಟದ ಸಮಾವೇಶ ನಡೆಯಬೇಕಾಗಿದೆ ಎಂದರು.

ಮಹಾತ್ಮಾ ಗಾಂಧೀಜಿಯನ್ನು ಹತ್ಯೆಗೈದ ಗೋಡ್ಸೆಯ ದೇಗುಲ ಕಟ್ಟುವ ಪರಿಸ್ಥಿತಿಯನ್ನು ಮತ್ತು ಆತನ ಚಿಂತನೆಯ ಹಾದಿಯಲ್ಲಿ ನಡೆಯುವವರು ಪ್ರಸ್ತುತ ಇದ್ದಾರೆ. ಅಂತಹವರಿಗೆ ಕೇವಲ ಅಧಿಕಾರ ಮಾತ್ರ ಬೇಕಾಗಿದೆÉ, ಕಾಂಗ್ರೆಸ್ ಪಕ್ಷಕ್ಕೆ ದೇಶ ಮುಖ್ಯವಾಗಿದೆಯೆಂದು ಹೇಳಿದರು.

ಜಿ.ಪಂ ಮಾಜಿ ಸದಸ್ಯೆ ಬೊಳ್ಳಮ್ಮ ನಾಣಯ್ಯ ಮಾತನಾಡಿ, ಕಾಂಗ್ರೆಸ್ಸಿಗರು ಮನೆ ಮನೆಗೆ ತೆರಳಿ ಕಾಂಗ್ರೆಸ್ ಸರಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕೆಂದರು.

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಮನು ಮೇದಪ್ಪ ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರೆ, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್ ವಂದಿಸಿದರು.

ಗೋಣಿಕೊಪ್ಪಲು: ಮಾಜಿ ಪ್ರÀಧಾನಿ ಇಂದಿರಾ ಗಾಂಧಿ ಅವರ 100ನೇ ಜನ್ಮ ದಿನಾಚರಣೆಯು ಗೋಣಿಕೊಪ್ಪಲುವಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಚೆಪ್ಪುಡಿರ ಅರುಣ್ ಮಾಚಯ್ಯ ಮಾತನಾಡಿ, ದೇಶ ಕಂಡ ಮಹಾನ್ ವ್ಯಕ್ತಿಯಲ್ಲಿ ಇಂದಿರಾ ಗಾಂಧಿ ಮೊದಲಿಗರಾಗಿದ್ದಾರೆ. ದೇಶಕ್ಕೆ 20 ಅಂಶದ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನರ ಕಷ್ಟಗಳಿಗೆ ಭಾಗಿಯಾಗಿದ್ದಾರೆ. ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಮಹಿಳೆಯಾಗಿದ್ದಾರೆ. ದೇಶದ ಐಕ್ಯತೆಗೆ ದುಡಿದ ಮಹಿಳೆಯಾಗಿದ್ದಾರೆ. ಹಸಿರು ಕ್ರಾಂತಿ ಮಾಡಿದ ಕೀರ್ತಿ ಇವರದ್ದು. ಸ್ತ್ರೀ ಸಬಲೀಕರಣದಿಂದ ಇಂದು ಮಹಿಳೆಯರು ಮುಂದೆ ಬಂದಿದ್ದಾರೆ ಎಂದು ಅವರ ಸಾಧನೆಯನ್ನು ಗುಣಗಾನ ಮಾಡಿದರು.

ಮತ್ತೋರ್ವ ಅತಿಥಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷÀ ಕೊರಕುಟ್ಟಿರ ಸರಾ ಚಂಗಪ್ಪ ಮಾತನಾಡಿ, ಬ್ಯಾಂಕ್ ರಾಷ್ಟ್ರೀಕೃತವಾಗುವಲ್ಲಿ ಇಂದಿರಾ ಗಾಂಧಿಯವರ ಪಾತ್ರ ಪ್ರಮುಖವಾಗಿದ್ದು, ಜನ ಸಾಮಾನ್ಯರಿಗೆ ಬ್ಯಾಂಕಿನ ವಹಿವಾಟು ಮಾಡಲು ಸಾಧ್ಯವಾಗಿದೆ. ದೇಶಕ್ಕಾಗಿ ಹಲವು ಯೋಜನೆಗಳನ್ನು ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಮತ್ತೋರ್ವ ಅತಿಥಿ ಜಿಲ್ಲಾ ಕಾಂಗ್ರೆಸ್ ಸದಸ್ಯ ಎರ್ಮುಹಾಜಿ ಮಾತನಾಡಿ, ಇವರ ಅವಧಿಯಲ್ಲಿ ದೇಶದಲ್ಲಾದ ಬದಲಾವಣೆಗಳನ್ನು ವಿವರಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪೆಮ್ಮಂಡ ಪೊನ್ನಪ್ಪ, ತುರ್ತು ಪರಿಸ್ಥಿತಿಯಲ್ಲಿ ದೇಶವನ್ನು ನಿಭಾಯಿಸುವಲ್ಲಿ ಯಶಸ್ವಿಯಾದ ಮಹಿಳೆ ಇಂದಿರಾ ಗಾಂಧಿ. ಇದರಿಂದ ಹಲವು ವಿರೋಧಗಳನ್ನು ಕಟ್ಟಿಕೊಳ್ಳಬೇಕಾದ ಪರಿಸ್ಥಿತಿ ಇವರ ಮೇಲೆ ಬಂತಾದರೂ ಯಾವದಕ್ಕೂ ದೃತಿಕೆಡದೆ ದೇಶವನ್ನು ಉತ್ತಮ ಮಟ್ಟಕ್ಕೆ ಕೊಂಡೊಯ್ದ ಮಹಿಳೆ ಎಂದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಮ್ಮದ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಕಾಡ್ಯಮಾಡ ಚೇತನ್, ಎ.ಜೆ ಬಾಬು, ಹುಮಾಯುನ್ ಪಾಷ, ಹಿಂದುಳಿದ ವರ್ಗಗಳ ತಾಲೂಕು ಅಧ್ಯಕ್ಷ ಶಾಜಿ ಅಚ್ಯುತ್ತನ್, ನಗರ ಕಾಂಗ್ರೆಸ್ ಅಧ್ಯಕ್ಷ ಸೋಮಣ್ಣ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಮೀರ್, ಗ್ರಾ ಪಂ ಸದಸ್ಯರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಮಂಜುಳ, ಮುರುಗ, ಧನಲಕ್ಷ್ಮಿ, ಯಾಸ್ಮಿನ್, ಶಾಹಿನ್, ಸುಲೈಖ, ರಾಜಶೇಖರ್, ಪಕ್ಷದ ಮುಖಂಡರುಗಳಾದ ರಮಾವತಿ, ನಜೀರ್ ಅಹಮ್ಮದ್, ನಾಮೇರ ಅಂಕಿತ್ ಪೊನ್ನಪ್ಪ, ಅಫ್ಸಲ್, ಶೀಭಾಮಣಿ ಮುಂತಾದವರು ಹಾಜರಿದ್ದರು.

ಸಿದ್ದಾಪುರ: ಮಾಜಿ ಪ್ರಧಾನಿ ಇಂದಿರಾಗಾಂಧಿಯವರ 100ನೇ ಹುಟ್ಟುಹಬ್ಬವನ್ನು ಚೆನ್ನಯ್ಯನಕೋಟೆಯಲ್ಲಿ ಆಚರಿಸಲಾಯಿತು.

ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯೆ ಲೀಲಾವತಿ, ತಾ.ಪಂ. ಸದಸ್ಯರುಗಳಾದ ಚಿನ್ನಮ್ಮ, ಕಾವೇರಮ್ಮ, ಜಿ.ಪಂ. ಮಾಜಿ ಸದಸ್ಯ ಹೆಚ್.ಸಿ. ಸಣ್ಣಯ್ಯ, ಯೋಗೇಶ್, ಹಮೀದ್‍ಹಾಜಿ, ಉಮೇಶ್, ಇತರರು ಹಾಜರಿದ್ದರು.

ಸೋಮವಾರಪೇಟೆ: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ದೇಶದ ಪ್ರಥಮ ಮಹಿಳಾ ಪ್ರಧಾನಿ ದಿ. ಇಂದಿರಾಗಾಂಧಿ ಅವರ ಜನ್ಮ ದಿನವನ್ನು ಆಚರಿಸಲಾಯಿತು.

ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪ ಹಚ್ಚಿ ಪ್ರಾರ್ಥಿಸಲಾಯಿತು.

ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್ ಮಾತನಾಡಿ, ದೇಶದ ಚುಕ್ಕಾಣಿ ಹಿಡಿದು ಮಾದರಿ ಆಡಳಿತ ನೀಡಿದ ಇಂದಿರಾಗಾಂಧಿ ಅವರು ದೇಶ ಕಂಡ ಮಹಾನ್ ನಾಯಕರಲ್ಲಿ ಓರ್ವರು. ದೀನ ದಲಿತರು, ಬಡವರ ಮೇಲಿನ ಕಾಳಜಿಯಿಂದ ತಮ್ಮ ಆಡಳಿತಾವಧಿಯಲ್ಲಿ ಅನೇಕ ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ಬಡವರ ಕಲ್ಯಾಣಕ್ಕಾಗಿ ಶ್ರಮಿಸಿದವರು ಎಂದು ಬಣ್ಣಿಸಿದರು.

ಈ ಸಂದರ್ಭ ಸಂಘದ ಪದಾಧಿಕಾರಿಗಳಾದ ಪಳನಿ ಸ್ವಾಮಿ, ಚನ್ನಯ್ಯ, ಹೆಚ್.ಓ. ಪ್ರಕಾಶ್, ಕೃಷ್ಣ, ರವಿ, ಕುಮಾರ್, ರಾಜೇಶ್, ನವೀನ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.