ಸುಂಟಿಕೊಪ್ಪ, ನ. 20: ಅಪ್ರಾಪ್ತ ಶಾಲಾ ಬಾಲಕಿಯರನ್ನು ಪುಸಲಾಯಿಸಿ ಆಟೋರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆಟೋ ಚಾಲಕ ಪ್ರಕಾಶ್ ಎಂಬಾತನನ್ನು ಸುಂಟಿಕೊಪ್ಪ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಅಪ್ರಾಪ್ತ ಶಾಲಾ ಬಾಲಕಿಯರನ್ನು ಪುಸಲಾಯಿಸಿ ಆಟೋರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ ಸಂಜೆ ಕತ್ತಲಲ್ಲಿ ನಿರ್ಜನ ಪ್ರದೇಶದಲ್ಲಿ ಬಾಲಕಿಯರನ್ನು ಬಿಟ್ಟು ಪರಾರಿಯಾಗಿದ್ದ ಆರೋಪಿ ಪ್ರಕಾಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಂ ಹಾಗೂ ಸಿಬ್ಬಂದಿಗಳು ಆರೋಪಿ ಪ್ರಕಾಶ್ನನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಆಟೋರಿಕ್ಷಾ (ಕೆಎ12-ಎ.2253) ವಾಹನವನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.