ಮೂರ್ನಾಡು, ನ. 21: ಬಾಡಗ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಗ್ರಾಮಾಂತರ ಕ್ರೀಡಾಕೂಟ ಆಯೋಜಿಸಲಾಗಿತ್ತು.ಮೂರ್ನಾಡು ವಿದ್ಯಾಸಂಸ್ಥೆ ಕ್ರೀಡಾ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾದ ಕ್ರೀಡಾಕೂಟವನ್ನು ಎಂ. ಬಾಡಗ ಗ್ರಾಮದ ಕಾಫಿ ಬೆಳೆಗಾರ ಮುಕ್ಕಾಟಿರ ಡಿ. ಚಂಗಪ್ಪ ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಗ್ರಾಮೀಣ ಕ್ರೀಡಾಕೂಟಗಳ ಆಯೋಜನೆಯಿಂದ ಗ್ರಾಮಸ್ಥರು ಒಂದೆಡೆ ಒಗ್ಗೂಡುವ ಅವಕಾಶ ದೊರಕುತ್ತದೆ. ಯುವಕರು ಕ್ರೀಡೆ ಯನ್ನು ಮೈಗೂಡಿಸಿಕೊಳ್ಳುವದ ರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಶುಭಹಾರೈಸಿದರು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ ಕ್ರೀಡೆಯಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯ ಎಂದರು.

ಎಂ. ಬಾಡಗ ಗ್ರಾಮದ ಮಾಜಿ ಸೈನಿಕ ಅಪ್ಪಚಂಡ ಅಣ್ಣಪ್ಪ ಮಾತನಾಡಿ ಕ್ರೀಡಾಕೂಟಗಳ ಆಯೋಜನೆಯಿಂದ ಯುವಕರಲ್ಲಿ ಕ್ರೀಡಾ ಮನೋಭಾವನೆ ಹೆಚ್ಚಾಗುತ್ತದೆ. ಗ್ರಾಮದ ಜನತೆಯನ್ನು ಒಟ್ಟು ಗೂಡಿಸುವ ಕೆಲಸ ಸಂಘದಿಂದ ಆಗಿದೆ ಎಂದರು. ಸಂಘದ ಅಧ್ಯಕ್ಷ ಕೋಟೆರ ಪ್ರತಾಪ್ ಕಾರ್ಯಪ್ಪ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಹಿರಿಯರಾದ ಪಾಂಡಂಡ ತಿಮ್ಮಯ್ಯ, ಸಂಘದ ಉಪಾಧ್ಯಕ್ಷ ಕೈಪಟೀರ ಹರೀಶ್ ಅಯ್ಯಪ್ಪ, ಕಾರ್ಯದರ್ಶಿ ಕಂಬೀರಂಡ ಸತೀಶ್ ಮುತ್ತಪ್ಪ, ಸದಸ್ಯರು ಹಾಜರಿದ್ದರು.