ಮಡಿಕೇರಿ, ನ. 21: ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ, ಹಾಗೂ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಇವರ ಸಂಯುಕ್ತಾಶ್ರಯ ದಲ್ಲಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಬೆಳ್ಳಿಹಬ್ಬ ಮಹೋತ್ಸವ ಹಾಗೂ ಕೊಡಗು ಜಿಲ್ಲಾ ಮಟ್ಟದ 25ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ತಾ. 22 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.
ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಎಚ್.ಟಿ.ಅನಿಲ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಕಾರ್ಯದರ್ಶಿ ಟಿ.ಜಿ. ಪ್ರೇಮಕುಮಾರ್, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮಹಾ ಪೋಷP ಕೆ.ಟಿ.ಬೇಬಿ ಮ್ಯಾಥ್ಯೂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಾಲ್ಟರ್ ಎಚ್.ಡಿ’ಮೆಲ್ಲೊ ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 2.45 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪಪ್ರಾಂಶುಪಾಲ ಬೊಮ್ಮೇಗೌಡ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಫಿಲಿಪ್ವಾಸ್ ಇತರರು ಭಾಗವಹಿಸಲಿದ್ದಾರೆ.