ಗೋಣಿಕೊಪ್ಪಲು,ನ.24 : ಗೋಣಿಕೊಪ್ಪಲು ಕಾವೇರಿ ಹಿಲ್ಸ್ ಬಡಾವಣೆಯಲ್ಲಿ ದುಸ್ಥಿತಿಯಲ್ಲಿದ್ದ ರಸ್ತೆಯನ್ನು ಸರಿಪಡಿಸಿಕೊಡುವಂತೆ ಬಡಾವಣೆಯ ಅಧ್ಯಕ್ಷ ತಿರುನೆಲ್ಲಿಮಾಡ ಜೀವನ್ ಮೂಲಕ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿತ್ತು.
ಮನವಿಯ ಮೇರೆ ಉಸ್ತುವಾರಿ ಸಚಿವರ ಆಪ್ತರಾದ ಕದ್ದಣಿಯಂಡ ಹರೀಶ್ ಬೋಪಣ್ಣನವರು ಸ್ಥಳಕ್ಕಾಗಮಿಸಿ ರಸ್ತೆಯ ಪರಿಸ್ಥಿತಿ ಗಮನಿಸಿ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ 22 ಲಕ್ಷ ಅನುದಾನವನ್ನು ರಸ್ತೆ ಕಾಮಗಾರಿಗೆ ಬಿಡುಗಡೆಗೊಳಿಸಿದ್ದರು. ಕಳೆದ ಎರಡು ತಿಂಗಳ ಹಿಂದೆ ಉಸ್ತುವಾರಿ ಸಚಿವರು ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ರಸ್ತೆ ಕಾಮಗಾರಿ ಆರಂಭಗೊಂಡಿತ್ತು. ಒಂದೇ ದಿನದಲ್ಲಿ ರಸ್ತೆಗೆ ಹಾಕಲಾಗಿದ್ದ ಡಾಂಬರು ಕಿತ್ತು ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು,ಸಾರ್ವಜನಿಕರು,ಬಡಾವಣೆ ನಿವಾಸಿಗಳು,ಇದರ ವಿರುದ್ದ ಆಕ್ಷೇಪ ವ್ಯಕ್ತಪಡಿಸಿ, ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದ್ದರು.
ಸಾರ್ವಜನಿಕರ ದೂರಿನಂತೆ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಸುರೇಶ್ ಕಾಮಗಾರಿ ಕಳಪೆ ಆಗಿರುವ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಗುತ್ತಿಗೆದಾರನಿಗೆ ಒಂದು ವಾರದೊಳಗೆ ಮರು ಡಾಂಬರಿಕರಣ ಮಾಡುವಂತೆ ನಿರ್ದೇಶನ ನೀಡಿದರು.
ಹಲವು ವರ್ಷಗಳಿಂದ ಬಡಾವಣೆಗೆ ರಸ್ತೆ ಇಲ್ಲದೆ ಪರದಾಡುತ್ತಿದ್ದೇವು ಇದೀಗ ರಸ್ತೆ ನಿರ್ಮಾಣವಾದರು ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದೆ.
ಅಧಿಕಾರಿಗಳು ಆಗಮಿಸಿದ ಸಂದರ್ಭ ಗ್ರಾ.ಪಂ ಸದಸ್ಯರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಜಮ್ಮಡ ಸೋಮಣ್ಣ, ಇಂಜಿನಿಯರ್ ಸಣ್ಣುವಂಡ ನವೀನ್, ಬಡಾವಣೆ ಅಧ್ಯಕ್ಷ ತಿರುನೆಲ್ಲಮಾಡ ಜೀವನ್ ಸೇರಿದಂತೆ ಬಡವಾಣೆ ನಿವಾಸಿಗಳು ಹಾಜರಿದ್ದರು.