ಸಿದ್ದಾಪುರ, ನ. 23: ಮುಸ್ಲಿಂ ಸಮುದಾಯದವರು ಒಗ್ಗಟ್ಟಿನ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ರಾಜ್ಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ ಸಲಹೆ ನೀಡಿದರು. ನೆಲ್ಲಿಹುದಿಕೇರಿ ಗ್ರಾಮದ ನಲ್ವತೆಕರೆಯ ಮಸೀದಿಯ ವತಿಯಿಂದ ಅಲ್ಲಿನ ಶಾದಿ ಮಹಲ್ ಸಭಾಂಗಣದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಅಲ್ಪಸಂಖ್ಯಾತರಿಗೆ ಹಲವಾರು ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ನೀಡುತ್ತಿದ್ದು. ಈ ಹಿನ್ನೆಲೆ ಅದರ ಸದುಪಯೋಗವನ್ನು ಪಡೆದುಕೊಂಡು ಮುಖ್ಯ ವಾಹಿನಿಗೆ ಬರಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಮುಖಂಡ ಉಸ್ಮಾನ್ ಹಾಜಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಸೀದಿಯ ಪದಾಧಿಕಾರಿಗಳಾದ ಬೀರಾನ್ ಕುಟ್ಟಿ, ಬಾಪುಟ್ಟಿ, ಹಂಸ ಹಾಗೂ ಇತರರು ಹಾಜರಿದ್ದರು.