ಸೋಮವಾರಪೇಟೆ, ನ.23: ತಮ್ಮ ಮಕ್ಕಳು ಯಾವದೇ ವ್ಯವಸಗಳಿಗೆ ಬಲಿಯಾಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕೆಂದು ಪುಷ್ಪಗಿರಿ ಜೇಸಿಸ್‍ನ ಪೂರ್ವ ವಲಯ ಉಪಾಧ್ಯಕ್ಷೆ ಎ.ಆರ್.ಮಮತ ಅಭಿಪ್ರಾಯಪಟ್ಟರು.

ಇಲ್ಲಿನ ನಂಜಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭ ದಲ್ಲಿ ಅವರು ಮಾತನಾಡಿದರು.

ಬಹುತೇಕ ಪೋಷಕರು ಹಣ ಸಂಪಾದನೆಗೆ ಹೆಚ್ಚಿನ ಮಹತ್ವ ಕೊಡುತ್ತಿರುವದರಿಂದ ಮಕ್ಕಳ ಭವಿಷ್ಯ ಮಸುಕಾಗುತ್ತಿದೆ. ವಿದ್ಯಾರ್ಥಿಗಳು ಡ್ರಗ್ಸ್, ಗಾಂಜಾದಂತಹ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವದರಿಂದ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ. ಆತ್ಮಹತ್ಯೆಯಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಕುರಿತು ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪುಷ್ಪಗಿರಿ ಜೇಸಿಸ್ ಅಧ್ಯಕ್ಷ ಮನೋಹರ್, ಸಂಸ್ಥೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಹಲವಾರು ಸ್ಥಳೀಯ ಪ್ರತಿಭೆಗಳು ಕಲೆ, ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿಕಟಪೂರ್ವ ಅಧ್ಯಕ್ಷ ಮಂಜುನಾಥ್, ಜೇಸಿರೇಟ್ ಅಧ್ಯಕ್ಷೆ ಮೀನಾ ಮಂಜುನಾಥ್, ಕಾರ್ಯದರ್ಶಿ ರುಬೀನಾ ಎಂ.ಎ., ಯೋಜನಾ ನಿರ್ದೇಶಕ ಪ್ರಕಾಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಿ.ಜೆ.ಜಯೇಶ್ ನಿರೂಪಿಸಿದರು.