ಸೋಮವಾರಪೇಟೆ,ನ. 23: ತಾಲೂಕಿನ ಶಾಂತಳ್ಳಿ, ಬೆಟ್ಟದಳ್ಳಿ, ತೋಳೂರುಶೆಟ್ಟಳ್ಳಿ, ಹಾನಗಲ್ಲು, ಕಿರಗಂದೂರು ಮತ್ತು ಚೌಡ್ಲು ಗ್ರಾ. ಪಂ. ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ತಾ. 28ರಂದು ಬೆಳಿಗ್ಗೆ 11 ಗಂಟೆಗೆ ಶಾಂತಳ್ಳಿಯ ಶ್ರೀಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ತಿಳಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ಉಸ್ತುವಾರಿ ಸಚಿವ ಸೀತಾರಾಂ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ನಿಗಮ ಮಂಡಳಿ ಅಧ್ಯಕ್ಷರುಗಳು, ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿದಂತೆ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಲೋಕೇಶ್ ತಿಳಿಸಿದ್ದಾರೆ.