ಕುಶಾಲನಗರ, ನ. 25: ಇಲ್ಲಿಗೆ ಸಮೀಪದ ಗುಡ್ಡೆಹೊಸೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಐಎನ್‍ಎಸ್ ಸ್ಪೋಟ್ರ್ಸ್ ಸೆಂಟರ್ ಆಶ್ರಯದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ ಜಿಲ್ಲಾಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ನಡೆಯಿತು. ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗಗಳಲ್ಲಿ ನಡೆದ ಪಂದ್ಯಾಟದಲ್ಲಿ ಜಿಲ್ಲೆಯ 40 ಕ್ಕೂ ಅಧಿಕ ಪತ್ರಕರ್ತರು ಪಾಲ್ಗೊಂಡಿದ್ದರು. ತಾ.26 ರಂದು (ಇಂದು) ಪಂದ್ಯಾಟದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.