ಮಡಿಕೇರಿ, ನ. 25: ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು ತಾಲೂಕು ಯುವ ಒಕ್ಕೂಟ ಮತ್ತು ಕಾವೇರಿ ಕಲಾವೃಂದ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಹಾಗೂ ನೆಹರು ಯುವ ಕೇಂದ್ರದ ಸಾಂಸ್ಕøತಿಕ ಕಾರ್ಯಕ್ರಮ, ಯುವಜನ ಮೇಳ, ಯುವ ಸಮ್ಮೇಳನ, ಕಾರ್ಯಾಗಾರ, ತರಬೇತಿ ಹಾಗೂ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ ಸಮಾರಂಭ ತಾ. 27 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ಯೋಜನೆ ಮತ್ತು ಸಾಂಖ್ಯಿಕ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್. ಸೀತಾರಾಂ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್, ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ. ವಿಜು ಸುಬ್ರಮಣಿ, ತಾ.ಪಂ. ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.