ನಾಪೆÇೀಕ್ಲು, ನ. 25: ರಾಷ್ಟ್ರೀಯ ಪಕ್ಷಗಳು ಧಾರ್ಮಿಕ ಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಆರೋಪಿಸಿದರು.ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ಹೊದವಾಡದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಅವರು ಮಾತನಾಡಿದರು. ಇಂದು ಜನರು ವಿಚಾರವಂತರಾಗಿದ್ದಾರೆ. ಪೆÇಳ್ಳು ಭರವಸೆಯನ್ನು ನಂಬುವವರಲ್ಲ ಎನ್ನುವದಕ್ಕೆ ಮುಂದಿನ ವಿಧಾನ ಸಭಾ ಚುನಾವಣೆ ಸಾಕ್ಷಿಯಾಗಲಿದೆ ಎಂದರು. ಮೋದಿ ನೇತೃತ್ವದ ಕೇಂದ್ರ ಸರಕಾರದ ಮೇಲೆ ಜನರು ನಂಬಿಕೆ ಕಳೆದುಕೊಂಡಿದ್ದಾರೆ. ಅಲ್ಪ ಅಂಖ್ಯಾತರಿಗೆ ಸೌಲಭ್ಯ ಒದಗಿಸುವದನ್ನು ಬಿಟ್ಟು ಅಲ್ಪ ಸಂಖ್ಯಾತರನ್ನು 2ನೇ ದರ್ಜೆ ನಾಗರಿಕರಂತೆ ಕಾಣಲಾಗುತ್ತ್ತಿದೆ ಎಂದು ದೂರಿದರು.
ಮಾಜಿ ಶಾಸಕ, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಜೀವಿಜಯ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು. ರಾಜ್ಯದ ಜನತೆ ಬಿಜೆಪಿ ಮತ್ತು ಕಾಂಗ್ರೆÉಸ್ ಪಕ್ಷದ ಆಡಳಿತದಿಂದ ಭ್ರಮನಿರಸನ ಗೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ ಮಾತನಾಡಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಮುಂದಿನ ಚುನಾವಣೆಯಲ್ಲಿ ಜಯಗಳಿಸುವದು ನಿಶ್ಚಯವಾಗಿದೆ. ಮತದಾರರು ಮತ ವಿಭಜನೆಯಾಗದಂತೆ ಎಚ್ಚರವಹಿಸ ಬೇಕು ಎಂದರು.
ಸಭೆಯಲ್ಲಿ ವೀರಾಜಪೇಟೆ ಕ್ಷೇತ್ರದ ಜೆ.ಡಿ.ಎಸ್. ಅಧ್ಯಕ್ಷ ಮತೀನ್, ಮೂರ್ನಾಡು ವಿಭಾಗದ ಜೆಡಿಎಸ್ ಉಪಾಧ್ಯಕ್ಷ ಜಾಸೀರ್, ಹಿರಿಯ ಮುಖಂಡ ಕಲಿಯಂಡ ಸಿ. ನಾಣಯ್ಯ, ರಷೀದ್, ಯಯಾಜ್ ನಾಹಿಮ್, ಸುಲೈಮಾನ್, ಮಹಮ್ಮದ್, ಎಂ.ಎಸ್. ಇಬ್ರಾಹಿಂ, ಗಫೂರ್, ಸಾಧಿಕ್, ಮತ್ತಿತರರು ಇದ್ದರು.